ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಐಪಿಎಲ್​ ಉತ್ತಮ ವೇದಿಕೆ; ಮಾಜಿ ಕ್ರಿಕೆಟಿಗ ಹೀಗೆನ್ನಲು ಕಾರಣವೇನು?

Akash Chopra
Published on

ಮುಂಬೈ: ವಿಶ್ವದ ಮಿಲಿಯನ್​ ಡಾಲರ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ ಆರಂಭಗೊಂಡು 51 ಪಂದ್ಯಗಳು ಮುಕ್ತಾಯಗೊಂಡಿದ್ದು, ರನ್​ ಪ್ರವಾಹವೇ ಹರಿದಿದೆ ಎಂದು ಹೇಳಬಹುದಾಗಿದೆ. ಐಪಿಎಲ್​ ನಡೆಯುತ್ತಿರುವಾಗಲೇ ಟಿ-20 ವಿಶ್ವಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇದು ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.

ಇದೀಗ ಇದಕ್ಕೆ ಸಂಬಂಧಿಸಿದಂತೆ ಕ್ರೀಡಾ ವಿಶ್ಲೇಷಕ ಹಾಗೂ ಮಾಜಿ ಕ್ರಿಕೆಟಿಗ ಆಕಾಶ್​ ಚೋಪ್ರಾ ಐಪಿಎಲ್​ ಕುರಿತಾಗಿ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಇವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಆಕಾಶ್​ ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಐಪಿಎಲ್​ ಒಂದು ಉತ್ತಮ ವೇದಿಕೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಫ್ಯಾನ್​ ಆರ್ಮಿಗಳು ಸಹ ಇದಕ್ಕೆ ತಕ್ಕಂತೆ ಕುಣಿಯುತ್ತವೆ. ಇದು ನನಗೆ ಆಶ್ಚರ್ಯ ತರಿಸಿದೆ ಎಂದು ಬರೆದುಕೊಂಡಿದ್ದಾರೆ.

ಟಿ-20 ವಿಶ್ವಕಪ್​ಗೆ ರೋಹಿತ್​ ಶರ್ಮಾರನ್ನು ಯಾವ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಆಕಾಶ್​ ಚೋಪ್ರಾ ಹೇಳಿದ್ದಾರೆ ಎನ್ನಲಾದ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆಕಾಶ್​ ಚೋಪ್ರಾ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net