ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅಗ್ರ ಟಿ20 ಲೀಗ್ ಎಂಬುದು ಎಲ್ಲರಿಗೂ ತಿಳಿದೇ ಇದೆ. 2008 ರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( BCCI ) ಪ್ರಾರಂಭಿಸಿದ ಈ ಪಂದ್ಯಾವಳಿ ಅನೇಕ ಪ್ರತಿಭಾನ್ವಿತ ಕ್ರಿಕೆಟಿಗರನ್ನು ಮುನ್ನೆಲೆಗೆ ತಂದಿದೆ. ಕೇವಲ ಭಾರತೀಯ ಆಟಗಾರರು ಮಾತ್ರವಲ್ಲ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಜಿಂಬಾಬ್ವೆ ಮತ್ತು ಇತರ ದೇಶಗಳ ಕ್ರಿಕೆಟಿಗರು ಐಪಿಎಲ್ ಮೂಲಕ ಅಪಾರ ಹಣವನ್ನು ಗಳಿಸುತ್ತಿದ್ದಾರೆ. ಅಲ್ಲದೆ, ತಮ್ಮ ಪ್ರತಿಭೆಯನ್ನು ಹೊರ ಜಗತ್ತಿನ ಮುಂದೆ ಸಾಬೀತು ಮಾಡಿಕೊಳ್ಳುತ್ತಿದ್ದಾರೆ.