19ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬೌಲರ್‌ಗಳ ಘಾತಕ ದಾಳಿಗೆ ಗುಜರಾತ್ ಟೈಟನ್ಸ್ (GT) ತತ್ತರಿಸಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಹೈ-ವೋಲ್ಟೇಜ್ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ, ಆರ್‌ಸಿಬಿ ಶಿಸ್ತುಬದ್ಧ ಬೌಲಿಂಗ್‌ಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿದೆ. ಆರ್‌ಸಿಬಿ ಪರ ಮಾರಕ ದಾಳಿ ಸಂಘಟಿಸಿದ ಯುವ ಬೌಲರ್ ರಸಿಖ್ ಸಲಾಮ್ ದಾರ್ 3 ವಿಕೆಟ್ ಪಡೆದು ಮಿಂಚಿದರೆ, ಅನುಭವಿ ವೇಗಿಗಳಾದ ಜೋಶ್ ಹ್ಯಾಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಉರುಳಿಸಿ ಜಿಟಿ ಬ್ಯಾಟಿಂಗ್ ಬೆನ್ನೆಲುಬು ಮುರಿದರು(ಏಜೆನ್ಸೀಸ್).