ಇನ್ನೂ ಪಂದ್ಯದ ವಿಚಾರಕ್ಕೆ ಬರುವುದಾದರೆ, ಈ ರೋಚಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಿ ವೈಭವ್ ಸೂರ್ಯವಂಶಿ (97 ರನ್, 29 ಎಸೆತ) ಮತ್ತು ಧ್ರುವ್ ಜುರೆಲ್ (50 ರನ್, 21 ಎಸೆತ) ಅವರ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್, ಇಶಾನ್ ಕಿಶನ್ (33 ರನ್, 11 ಎಸೆತ) ಅವರ ಹೋರಾಟದ ಹೊರತಾಗಿಯೂ ಪವರ್‌ಪ್ಲೇನಲ್ಲಿಯೇ 57 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ರಾಜಸ್ಥಾನ ಪರ ಜೋಫ್ರಾ ಆರ್ಚರ್ (3/58) ಮತ್ತು ನಾಂದ್ರೆ ಬರ್ಗರ್ (2/26) ಮಾರಕ ದಾಳಿ ನಡೆಸಿ ಹೈದರಾಬಾದ್ ತಂಡವನ್ನು 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಕಟ್ಟಿಹಾಕಿದರು. ಈ ಸೋಲಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಟೂರ್ನಿಯಿಂದ ಹೊರಬಿದ್ದಿದ್ದು, ರಾಜಸ್ಥಾನ ರಾಯಲ್ಸ್ ತಂಡವು ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎದುರಿಸಲು ಶುಕ್ರವಾರ ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಡಲಿದೆ, (ಏಜೆನ್ಸೀಸ್).