ಪ್ರಸಕ್ತ ಸೀಸನ್‌ನ ಲೀಗ್ ಹಂತದಲ್ಲಿ 14 ಪಂದ್ಯಗಳಿಂದ 9 ಗೆಲುವಿನೊಂದಿಗೆ ಒಟ್ಟು 18 ಅಂಕಗಳನ್ನು ಗಳಿಸಿದ್ದ ಗುಜರಾತ್ ಟೈಟನ್ಸ್ ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತ್ತು. ಮತ್ತೊಂದೆಡೆ, ರಾಜಸ್ಥಾನ ರಾಯಲ್ಸ್ ತಂಡವು 16 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ, ಇಂದಿನ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾದರೆ, ಗುಜರಾತ್ ಟೈಟನ್ಸ್ ತಂಡವು ನೇರವಾಗಿ ಫೈನಲ್ ಹಂತಕ್ಕೇರಲಿದೆ. ಆದರೆ, ರಾಜಸ್ಥಾನ ರಾಯಲ್ಸ್ ತಂಡವು ಫೈನಲ್ ತಲುಪಬೇಕಾದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ, (ಏಜೆನ್ಸೀಸ್).