ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಹಿಂದೆ ಸ್ಪಷ್ಟ ತಂತ್ರವಿತ್ತು ಎಂದ ಅವರು, ಪವರ್ ಪ್ಲೇನಲ್ಲೇ ಗುಜರಾತ್ ಟೈಟನ್ಸ್ ತಂಡದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವುದು ನಮ್ಮ ಪ್ರಮುಖ ಯೋಜನೆಯಾಗಿತ್ತು, ಇದರಿಂದ ರನ್ ಬೆನ್ನಟ್ಟುವುದು ಸುಲಭವಾಗುತ್ತದೆ ಎಂದು ಭಾವಿಸಿದ್ದೆವು ಎಂದು ತಿಳಿಸಿದರು. ಅಲ್ಲದೆ, ನಮ್ಮ ಬೌಲರ್‌ಗಳು ಈ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಶ್ಲಾಘಿಸಿದ ಪಾಟೀದಾರ್, ತಂಡದ ಈ ಮಹಾನ್ ಗೆಲುವಿನಲ್ಲಿ ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ರಸಿಖ್ ಸಲಾಮ್ ದಾರ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ ಮತ್ತು ರೊಮಾರಿಯೋ ಶೆಫರ್ಡ್ ಸೇರಿದಂತೆ ಪ್ರತಿಯೊಬ್ಬ ಬೌಲರ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.