ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಷರತ್ತು ಬದ್ಧ ಒಪ್ಪಿಗೆ ನೀಡಿತ್ತು. ಆದರೆ, ಆರ್ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ಪಂದ್ಯಗಳನ್ನು ಆಡುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಮೀನಾಮೇಷ ಎಣಿಸುತ್ತಿತ್ತು. ಆದರೆ, ಅಂತಿಮವಾಗಿ ಒಪ್ಪಿಗೆ ನೀಡಿರುವ ಆರ್ಸಿಬಿ, ಕೇವಲ ಐದು ಪಂದ್ಯಗಳನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ.