ಬೆಂಗಳೂರು: ಟೀಮ್ ಇಂಡಿಯಾದ 'ರನ್ ಮೆಷಿನ್', ದಾಖಲೆಗಳ ಸರದಾರ, ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ 'ಕಿಂಗ್' ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೇ ಮಾ.28ರಿಂದ ಐಪಿಎಲ್ನ ಕಿಕ್ಸ್ಟಾರ್ಟ್ ಪಂದ್ಯವು ಹಾಲಿ ಚಾಂಪಿಯನ್ಸ್ ಆರ್‌ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದ್ದು, ಈ ಪಂದ್ಯದ ಟಿಕೆಟ್‌ಗಳ ಹಂಚಿಕೆ ಇಂದಿನಿಂದ ಆರಂಭವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಫ್ರಾಂಚೈಸಿ, ತನ್ನ ಅಭಿಮಾನಿಗಳಿಗೆ ಕೆಲವು ಮಹತ್ವದ ಸಲಹೆಗಳನ್ನು ಹಂಚಿಕೊಂಡಿದೆ.