ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಆರ್ಸಿಬಿ ಪರ ನಾಯಕನ ಆಟ ಪ್ರದರ್ಶಿಸಿದ ರಜತ್ ಪಾಟೀದಾರ್ ಕೇವಲ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಬ್ಬರದ 93 ರನ್ ಸಿಡಿಸಿ ಅಜೇಯರಾಗಿ ಉಳಿದರು. ಇವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ (25 ಎಸೆತಗಳಲ್ಲಿ 43 ರನ್, 5 ಬೌಂಡರಿ, 1 ಸಿಕ್ಸರ್) ಮತ್ತು ಕೃಣಾಲ್ ಪಾಂಡ್ಯ (28 ಎಸೆತಗಳಲ್ಲಿ 43 ರನ್, 5 ಬೌಂಡರಿ, 2 ಸಿಕ್ಸರ್) ತಂಡದ ಸ್ಕೋರ್ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಗುಜರಾತ್ ಟೈಟನ್ಸ್ ತಂಡದ ಬೌಲರ್ಗಳಲ್ಲಿ ಕಗಿಸೊ ರಬಾಡ ಮತ್ತು ಜೇಸನ್ ಹೋಲ್ಡರ್ ತಲಾ ಎರಡು ವಿಕೆಟ್ ಪಡೆದರೆ, ಪ್ರಸಿದ್ಧ ಕೃಷ್ಣ ಒಂದು ವಿಕೆಟ್ ಉರುಳಿಸಿದರು.