ಬಳಿಕ 156 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ತಂಡ 18 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯಭೇರಿ ಬಾರಿಸಿತು. ಬೆಂಗಳೂರು ಪರ ವಿರಾಟ್ ಕೊಹ್ಲಿ (42 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ಗಳೊಂದಿಗೆ ಅಜೇಯ 75 ರನ್) ಭರ್ಜರಿ ಅರ್ಧಶತಕ ಬಾರಿಸಿದರೆ, ವೆಂಕಟೇಶ್ ಅಯ್ಯರ್ (16 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ಗಳೊಂದಿಗೆ 32) ಉತ್ತಮ ಸಾಥ್ ನೀಡಿದರು. ಗುಜರಾತ್ ಪರ ರಶೀದ್ ಖಾನ್ ಎರಡು ವಿಕೆಟ್ ಪಡೆದರೆ, ಸಿರಾಜ್, ರಬಾಡ ಮತ್ತು ಅರ್ಷದ್ ಖಾನ್ ತಲಾ ಒಂದು ವಿಕೆಟ್ ಪಡೆದರು.