

ಮೆಲ್ಬೋರ್ನ್: ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಡಿಸೆಂಬರ್ 26ರಿಂದ ಮೆಲ್ಬೋರ್ನ್ನಲ್ಲಿ ಆರಂಭವಾಗಲಿದ್ದು, ಬಾಕ್ಸಿಂಗ್ ಡೇ ಟೆಸ್ಟ್ಗಾಗಿ (Boxing Day Test) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭರ್ಜರಿ ತಯಾರಿ ನಡೆಸಿವೆ. ಇನ್ನೂ ಸರಣಿಯ ಮೂರನೇ ಪಂದ್ಯ ಮಳೆಯಿಂದಾಗಿ ನೀರಸ ಡ್ರಾಗೊಂಡಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫಿನಾಲೆ (World Test Championship Finale) ದೃಷ್ಠಿಯಲ್ಲಿ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದ್ದು, ಕಠಿಣ ಅಭ್ಯಾಸ ನಡೆಸುತ್ತಿವೆ.
ಸರಣಿಯ ಮೊದಲ ಪಂದ್ಯ ಹೊರತುಪಡಿಸಿದರೆ ಉಳಿದೆರದು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ. ನಾಲ್ಕನೇ ಪಂದ್ಯವನ್ನು ಗೆಲ್ಲುವ ನಿಟ್ಟಿನಲ್ಲಿ ಟೀಮ್ ಇಂಡಿಯಾದ (Team India) ಆಟಗಾರರು ಎಂಸಿಜಿ ಕ್ರೀಡಾಂಗಣದಲ್ಲಿ ಬೆವರು ಹರಿಸುತ್ತಿದ್ದು, ಅಭ್ಯಾಸದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ (Rohit Sharma) ಗಾಯಗೊಂಡಿದ್ದು, ಅರ್ಧಕ್ಕೆ ಮೈದಾನದಿಂದ ಹೊರನಡೆದಿದ್ದಾರೆ.
ನೆಟ್ಸ್ನಲ್ಲಿ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ (Rohit Sharma) ಚೆಂಡು ಎಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದ್ದು, ತೀವ್ರ ನೋವಿನಿಂದಾಗಿ ರೋಹಿತ್ ಶರ್ಮ ಅಭ್ಯಾಸವನ್ನು ತಕ್ಷಣವೇ ನಿಲ್ಲಿಸಿದ್ದು ಫಿಸಿಯೋ ಬಂದು ಪರಿಶೀಲಿಸಿದ್ದಾರೆ. ಇದಾದ ಬಳಿಕವೂ ನೋವು ಕಡಿಮೆಯಾಗದ ಕಾರಣ ರೋಹಿತ್ ಮೈದಾನದಿಂದ ಹೊರನಡೆದಿದ್ದು, ಈ ವಿಚಾರ ಇದೀಗ ಟೀಮ್ ಇಂಡಿಯಾಗೆ (Team India) ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಡಿಸೆಂಬರ್ 26ರಿಂದ ಬಾಕ್ಸಿಂಗ್ ಡೇ ಟೆಸ್ಟ್ ಶುರುವಾಗಲಿದ್ದು, ಇದಕ್ಕೂ ಮುನ್ನ ರೋಹಿತ್ ಶರ್ಮ ಗಾಯಕ್ಕೀಡಾಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಗಾಯದ ತೀವ್ರತೆ ಕುರಿತಾಗಿ ಮಾಹಿತಿ ಇನ್ನು ಹೊರಬೀಳದ ಕಾರಣ ಈ ವಿಚಾರ ಚಿಂತೆಗೀಡು ಮಾಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫಿನಾಲೆ ದೃಷ್ಟಿಯಿಂದ ಭಾರತಕ್ಕೆ ಮುಂಬರುವ ಎರಡು ಪಂದ್ಯಗಳು ಮಹತ್ವದಾಗಿದ್ದು, ಅಂತಿಮವಾಗಿ ಏನಾಗಲಿದೆ ಎಂದು ಕಾದುನೋಡಬೇಕಿದೆ.