ಇಂಗ್ಲೆಂಡ್ ತಂಡಕ್ಕೆ ದಕ್ಷಿಣ ಆಫ್ರಿಕಾದ ದಿಗ್ಗಜ ಬ್ಯಾಟ್ಸ್‌ಮನ್‌ನಿಂದ ಬ್ಯಾಟಿಂಗ್ ಸಲಹೆ...!

jacques kallis
Published on

ಲಂಡನ್: ದಕ್ಷಿಣ ಆಫ್ರಿಕಾದ ದಿಗ್ಗಜ ಬ್ಯಾಟ್ಸ್‌ಮನ್ ಜಾಕ್ಸ್ ಕಾಲಿಸ್, ಶ್ರೀಲಂಕಾ ಪ್ರವಾಸದ ವೇಳೆ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಇಂಗ್ಲೆಂಡ್ ತಂಡ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಕುರಿತು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಣೆ ಹೊರಡಿಸಿದ್ದು, ಜನವರಿ 2 ರಂದು ಇಂಗ್ಲೆಂಡ್ ತಂಡ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದೆ.

ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಜಾಕ್ಸ್ ಕಾಲಿಸ್ ಮೊದಲ ಬಾರಿಗೆ ವಿದೇಶಿ ತಂಡವೊಂದಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. 45 ವರ್ಷದ ಕಾಲಿಸ್ ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತಂಡಕ್ಕೂ ಬ್ಯಾಟಿಂಗ್ ಸಲಹೆಗಾರರಾಗಿದ್ದರು. ದಕ್ಷಿಣ ಆಫ್ರಿಕಾದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿರುವ ಕಾಲಿಸ್, 166 ಟೆಸ್ಟ್ ಪಂದ್ಯಗಳಿಂದ ಸರಾಸರಿ 55.37 ರಂತೆ 13298 ರನ್ ಬಾರಿಸಿ, 292 ವಿಕೆಟ್ ಕಬಳಿಸಿದ್ದಾರೆ. ಇಂಗ್ಲೆಂಡ್ ತಂಡದೊಂದಿಗೆ ಕಾಲಿಸ್ ಭಾರತ ಪ್ರವಾಸಕ್ಕೂ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಕುರಿತು ಅಂತಿಮ ತೀರ್ಮಾನ ಹೊರಬಿದ್ದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net