

ದುಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಜಸ್ಪ್ರೀತ್ ಬುಮ್ರಾರನ್ನು (Jasprit Bumrah) ಐಸಿಸಿ ವರ್ವದ ಕ್ರಿಕೆಟಿಗೆ ಎಂದು ಘೋಷಿಸಿದೆ. 2024ರಲ್ಲಿ ಬುಮ್ರಾರ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರಿಗೆ ಪ್ರತಿಷ್ಠಿತ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನುನೀಡಿ ಐಸಿಸಿ ಸತ್ಕರಿಸುತ್ತಿದೆ.
ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ರೇಸಿನಲ್ಲಿ ಜಸ್ಪ್ರೀತ್ ಬುಮ್ರಾ (Jasprit Bumrah) ಮಾತ್ರವಲ್ಲದೇ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ಇಂಗ್ಲೆಂಡ್ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಇದ್ದರು. ಈ ಮೂವರನ್ನು ಹಿಂದಿಕ್ಕಿ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಯಶಸ್ವಿಯಾಗಿದ್ಧಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಐಸಿಸಿ, ಜಸ್ಪ್ರೀತ್ ಬುಮ್ರಾ (Jasprit Bumrah) ಅವರಿಗೆ ಪ್ರತಿಷ್ಠಿತ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2024ರಲ್ಲಿ ಅವರ ಅಸಾಮಾನ್ಯ ಆಟವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಐಸಿಸಿ ತ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016) ಮತ್ತು ವಿರಾಟ್ ಕೊಹ್ಲಿ (2017, 2018) ಈ ಪ್ರಶಸ್ತಿಗೆ ಭಾಜನರಾಗಿದ್ದರು. 7 ವರ್ಷಗಳ ನಂತರ ಭಾರತೀಯರೊಬ್ಬರು ಈ ಪ್ರಶಸ್ತಿಯನ್ನು ಪಡೆಯುತ್ತಿರುವುದು ಮತ್ತಷ್ಟು ವಿಶೇಷವಾಗಿದೆ.
2024ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಸರಣಿ, ಟಿ20 ವಿಶ್ವಕಪ್ ಸೇರಿದಂತೆ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಬುಮ್ರಾರನ್ನು ನಿನ್ನೆ (ಜನವರಿ 27) ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗನಾಗಿ ಆಯ್ಕೆ ಮಾಡಲಾಗಿತ್ತು. ಈ ಮೂಲಕ ಒಂದೇ ವರ್ಷದಲ್ಲಿ ಎರಡೆರಡು ಐಸಿಸಿ ಪ್ರಶಸ್ತಿ ಗೆಲ್ಲುವ ಮುನ್ನ ಬುಮ್ರಾ ಹೊಸ ದಾಖಲೆಯನ್ನು ಬರೆದಿದ್ದಾರೆ.