ವಿಶ್ವಕಪ್ ಆಡಲು ಕಿವೀಸ್ ನಾಯಕನ ತವಕ

willaa
Published on

ವೆಲ್ಲಿಂಗ್ಟನ್: ಐಪಿಎಲ್ ಟೂರ್ನಿಯಲ್ಲಿ ಬಲ ಮೊಣಕಾಲಿನ ಅಸ್ಥಿರಜ್ಜು ಸಮಸ್ಯೆಗೆ ತುತ್ತಾಗಿದ್ದ ನ್ಯೂಜಿಲೆಂಡ್ ಸೀಮಿತ ಓವರ್ ತಂಡದ ನಾಯಕ ಕೇನ್ ವಿಲಿಯಮ್ಸನ್, ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಸಿಎಸ್‌ಕೆ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದ ವಿಲಿಯಮ್ಸನ್ ಬಳಿಕ ಶಸಚಿಕಿತ್ಸೆಗೆ ಒಳಪಟ್ಟಿದ್ದರು. 2015 ಮತ್ತು 2019ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತಂಡ ಸತತ ಫೈನಲ್ ಪ್ರವೇಶಿಸುವಲ್ಲಿ ವಿಲಿಯಮ್ಸನ್ ಪ್ರಮುಖ ಪಾತ್ರವಹಿಸಿದ್ದರು.

ವಿಲಿಯಮ್ಸನ್ ಕಸರತ್ತು ನಡೆಸುತ್ತಿರುವ ವಿಡಿಯೋ ಹಂಚಿಕೊಂಡಿರುವ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ವಾರಕ್ಕೊಮ್ಮೆ ವಿಲಿಯಮ್ಸನ್ ಅವರ ಫಿಟ್ನೆಸ್ ಪರೀಕ್ಷೆ ನಡೆಸುತ್ತಿದೆ ಎನ್ನಲಾಗಿದೆ. ಇದೇ ಮೊದಲ ಬಾರಿಗೆ ದೀರ್ಘ ಸಮಯದ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಚೇತರಿಕೆಯ ಹಾದಿಯೂ ದೀರ್ಘಾವಧಿ ಹೊಂದಿದೆ ಎಂದು ವಿಲಿಯಮ್ಸನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net