ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

KKR Star Venkatesh Iyer
Published on

ನವದೆಹಲಿ: ಕೋಲ್ಕತ್ತಾ ನೈಟ್ ರೈಡರ್ಸ್ ಸ್ಟಾರ್ ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರು ಶ್ರುತಿ ರಘುನಾಥನ್ ಅವರನ್ನು ಭಾನುವಾರ ವಿವಾಹವಾದರು.  ಈ ಕುರಿತಾದ ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ವೆಂಕಟೇಶ್​ ಅಯ್ಯರ್​ ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ. ಇಂದು ಈ ಜೋಡಿಯ ವಿವಾಹ ಸಂಪ್ರದಾಯಬದ್ಧವಾಗಿ ನೆರವೇರಿತು. ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಕೆಕೆಆರ್​ ಫ್ರಾಂಚೈಸಿ ಮತ್ತು ತಂಡದ ಸಹ ಆಟಗಾರರು ಸೇರು ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಈ ಜೋಡಿಗೆ ಶುಭ ಹಾರೈಸಿದ್ದಾರೆ.

ವೆಂಕಟೇಶ್​ ಅಯ್ಯರ್ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಕೆಕೆಆರ್ ತಂಡದ ಸದ್ಯನಾಗಿದ್ದಾರೆ. ಈ ಬಾರಿ 14 ಪಂದ್ಯಗಳನ್ನಾಡಿ 370 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net