ಕೆಕೆಆರ್ ತಂಡಕ್ಕೆ 7 ವಿಕೆಟ್ ಜಯ

KKR
Published on

ಅಬುಧಾಬಿ: ಯುವ ಬ್ಯಾಟ್ಸ್‌ಮನ್ ಶುಭಮಾನ್ ಗಿಲ್ (70*ರನ್, 62 ಎಸೆತ, 5 ಬೌಂಡರಿ, 2 ಸಿಕ್ಸರ್) ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಲವಾಗಿ ಎರಡು ಬಾರಿ ಚಾಂಪಿಯನ್ ಕೋಲ್ಕತ ನೈಟ್ ರೈಸರ್ಸ್‌ ತಂಡ ಐಪಿಎಲ್-13ರಲ್ಲಿ ಗೆಲುವಿನ ಖಾತೆ ತೆರೆಯಿತು. ಶೇಖ್ ಜಯೆದ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡ 7 ವಿಕೆಟ್‌ಗಳಿಂದ ಸನ್‌ರೈಸರ್ಸ್‌ ತಂಡವನ್ನು ಸೋಲಿಸಿತು. ಮೊದಲ ಪಂದ್ಯದಲ್ಲಿ ಮುಂಬೈಗೆ ಶರಣಾಗಿದ್ದ ದಿನೇಶ್ ಕಾರ್ತಿಕ್ ಬಳಗ ಗೆಲುವಿನ ಹಳಿಗೇರಿದರೆ, ಡೇವಿಡ್ ವಾರ್ನರ್ ಪಡೆ ಸತತ 2ನೇ ಸೋಲು ರುಚಿ ಕಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್‌ ಕನ್ನಡಿಗ ಮನೀಷ್ ಪಾಂಡೆ (51ರನ್, 38 ಎಸೆತ, 3 ಬೌಂಡರಿ, 2 ಸಿಕ್ಸರ್) ಸಮಯೋಚಿತ ಬ್ಯಾಟಿಂಗ್ ಲವಾಗಿ 4 ವಿಕೆಟ್‌ಗೆ 142 ರನ್ ಕಲೆಹಾಕಿತು. ಪ್ರತಿಯಾಗಿ ಈ ಸಾಧರಣ ಮೊತ್ತ ಬೆನ್ನಟ್ಟಿದ ಕೆಕೆಆರ್ ತಂಡ, ಆರಂಭಿಕ ವೈಲ್ಯದ ನಡುವೆಯೂ 18 ಓವರ್‌ಗಳಲ್ಲಿ 3 ವಿಕೆಟ್‌ಗೆ 145 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net