

CSK : ಚೈನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶನಿವಾರ (ಏ.05) ಚೈನ್ನೈ ಸೂಪರ್ ಕಿಂಗ್(ಸಿಎಸ್ಕೆ) ತಂಡ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 25 ರನ್ಗಳಿಂದ ಗೆದ್ದಿದೆ.
ಡೆಲ್ಲಿ ಪರ ಕನ್ನಡಿಗ ಕೆ.ಎಲ್.ರಾಹುಲ್ ಭರ್ಜರಿ ಅರ್ಧ ಶತಕದ ಸಹಾಯದಿಂದ (51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 6 ಬೌಂಡರಿ) 77 ರನ್ ಗಳಿಸುವ ಮೂಲಕ ಡೆಲ್ಲಿ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 183 ರನ್ ಗಳಿಸಿತು.
184 ರನ್ಗಳ ಗುರಿ ಬೆನ್ನಟ್ಟಿದ ಸಿಎಸ್ಕೆ 20 ಒವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಲಷ್ಟೇ ಶಕ್ತವಾಗಿತು. ಈ ಮೂಲಕ ನಾಲ್ಕು ಮ್ಯಾಚ್ಗಳನ್ನು ಆಡಿರುವ ಸಿಎಸ್ಕೆ ಸತತ ಮೂರು ಪಂದ್ಯಗಳಲ್ಲಿ ಸೋತಿದೆ.
ಮಾ.22ರಿಂದ ಶುರುವಾದ ಐಪಿಎಲ್ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಉತ್ತಮ ಆಲ್‌ರೌಂಡ್ ಪ್ರದರ್ಶನದ ಮೂಲಕ ಪ್ರಸ್ತುತ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಮಿಂಚುತ್ತಿದೆ. ಈ ಮಧ್ಯೆ ಐದು ಬಾರಿ ಚಾಂಪಿಯನ್ಸ್ ತಂಡ ಎಂದೇ ಗುರುತಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್, ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದೇ ಒಂದು ಮ್ಯಾಚ್‌ನಲ್ಲಿ ಗೆಲುವು ಸಾಧಿಸಿದೆ.(ಏಜೆನ್ಸೀಸ್)