ಟೀಮ್ ಇಂಡಿಯಾ ಗೆಲುವಿನ ಓಟ: ಮಿಂಚಿದ ಕೊಹ್ಲಿ, ಕನ್ನಡಿಗ ರಾಹುಲ್

New Project
Published on

ದುಬೈ: ಭರ್ಜರಿ ಗೆಲುವಿನ ಓಟ ಮುಂದುವರಿಸಿರುವ ಟೀಮ್ ಇಂಡಿಯಾ, 8 ವರ್ಷಗಳ ಬಳಿಕ ಪುನಾರಂಭಗೊಂಡಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಸತತ ಮೂರನೇ ಹಾಗೂ ಒಟ್ಟಾರೆ ಐದನೇ ಬಾರಿಗೆ ೈನಲ್‌ಗೇರಿದೆ. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ (84 ರನ್, 98 ಎಸೆತ, 5 ಬೌಂಡರಿ) ಸಮಯೋಚಿತ ಆಟ ಹಾಗೂ ವೇಗಿ ಮೊಹಮದ್ ಶಮಿ (48ಕ್ಕೆ 3) ಸಹಿತ ಇತರ ಬೌಲರ್‌ಗಳ ಶಿಸ್ತಿನ ದಾಳಿಯ ನೆರವಿನಿಂದ ಭಾರತ ತಂಡ ಮೊದಲ ಸೆಮಿೈನಲ್‌ನಲ್ಲಿ ಏಕದಿನ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ಎದುರು 4 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ರೋಹಿತ್ ಶರ್ಮ ಬಳಗ 2023ರ ಏಕದಿನ ವಿಶ್ವಕಪ್ ೈನಲ್ ಸೋಲಿನ ನೋವನ್ನು ಕಡಿಮೆಗೊಳಿಸಿದೆ. ನ್ಯೂಜಿಲೆಂಡ್ ಹಾಗೂ ದ.ಆಫ್ರಿಕಾ ನಡುವಿನ ವಿಜೇತರ ಎದುರು ಭಾರತ ತಂಡ ಭಾನುವಾರ ದುಬೈನಲ್ಲೇ ಪ್ರಶಸ್ತಿಗಾಗಿ ಕಾದಾಡಲಿದೆ.

ದುಬೈ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಉಪಾಂತ್ಯ ಕಾದಾಟದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ಗೆ ಇಳಿಯಿತು. ನಾಯಕ ಸ್ಟೀವನ್ ಸ್ಮಿತ್ (73 ರನ್, 96 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಎಡಗೈ ಬ್ಯಾಟರ್ ಅಲೆಕ್ಸ್ ಕ್ಯಾರಿ (61 ರನ್, 57 ಎಸೆತ, 8 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ನಡುವೆಯೂ ಭಾರತೀಯರ ಸಂಘಟಿತ ದಾಳಿಗೆ ನಲುಗಿದ ಆಸೀಸ್ 49.3 ಓವರ್‌ಗಳಲ್ಲಿ 264 ರನ್‌ಗಳಿಗೆ ಆಲೌಟ್ ಆಯಿತು. ಪ್ರತಿಯಾಗಿ 43 ರನ್‌ಗಳಿಗೆ ಆರಂಭಿಕರಿಬ್ಬರನ್ನು ಕಳೆದುಕೊಂಡ ಭಾರತ ಸಂಕಷ್ಟಕ್ಕೆ ಸಿಲುಕಿತು. ಆಗ 36 ವರ್ಷದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ (45 ರನ್, 62 ಎಸೆತ, 3 ಬೌಂಡರಿ) ಅಮೂಲ್ಯ ಜತೆಯಾಟದ ಮೂಲಕ ಚೇಸಿಂಗ್‌ಗೆ ಬಲ ತುಂಬಿದರು. ಕೊನೆಯಲ್ಲಿ ವಿಕೆಟ್ ಕೀಪರ್-ಬ್ಯಾಟರ್, ಕನ್ನಡಿಗ ಕೆಎಲ್ ರಾಹುಲ್ (42* ರನ್, 34 ಎಸೆತ, 2 ಬೌಂಡರಿ, 2 ಸಿಕ್ಸರ್) ಸಮಯೋಚಿತ ಆಟದ ನೆರವಿನಿಂದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್‌ಗೆ 267 ರನ್‌ಗಳಿಸಿ ಗೆಲುವು ಒಲಿಸಿಕೊಂಡಿತು.

5. ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಐದನೇ ಬಾರಿಗೆ ೈನಲ್‌ಗೇರಿದೆ. ಇದಕ್ಕೂ ಮುನ್ನ 2000, 2002, 2013,2017ರಲ್ಲಿ ಪ್ರಶಸ್ತಿ ಸುತ್ತಿಗೇರಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net