ಶಸ್ತ್ರಚಿಕಿತ್ಸೆಗೆ ಒಳಗಾದ ಟೀಂ ಇಂಡಿಯಾ ಸ್ಟಾರ್ ಆಟಗಾರ Kuldeep Yadav

kuldeepyadav
Published on

Kuldeep Yadav : ಟೀಂ ಇಂಡಿಯಾದ ಆಟಗಾರ Kuldeep Yadav ಕೆಲ ದಿನಗಳಿಂದ ಗಾಯದಿಂದ ಬಳಲುತ್ತಿದ್ದರು. ಈ ಆಟಗಾರ ಈಗ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಬಹಳ ದಿನಗಳಿಂದ ಗಾಯದಿಂದ ಬಳಲುತ್ತಿದ್ದಾರೆ. ಈ ಗಾಯದಿಂದಾಗಿ ಅವರು ನ್ಯೂಜಿಲೆಂಡ್ ಸರಣಿಯ ಎಲ್ಲಾ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದ ಬಿಸಿಸಿಐ, ಕುಲದೀಪ್ ಯಾದವ್ ದೀರ್ಘಕಾಲದಿಂದ ಎಡ ತೊಡೆಸಂದು ಗಾಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದೆ.

ಕುಲದೀಪ್ ಯಾದವ್ ಆಸ್ಟ್ರೇಲಿಯಾ ಸರಣಿಗೆ ಲಭ್ಯವಿಲ್ಲದ ಕಾರಣ ಬಿಸಿಸಿಐ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದರ ಬೆನ್ನಲ್ಲೇ, ಗಾಯದಿಂದ ಚೇತರಿಸಿಕೊಳ್ಳಲು ಕುಲದೀಪ್ ಯಾದವ್ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ ಎಂದು ವರದಿಗಳು ಬಂದವು. ಆದರೆ ಈಗ ಆ ಸುದ್ದಿ ನಿಜವಾಗಿದೆ. ಕುಲದೀಪ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದನ್ನು ಅವರೇ ಬಹಿರಂಗಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net