

ಕ್ರೈಸ್ಟ್ ಚರ್ಚ್: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಮಿಂಚಿರುವ ಬೆಂಗಳೂರು ಮೂಲದ ರಚಿನ್ ರವೀಂದ್ರ ಹಾಗೂ ಆಲ್ರೌಂಡರ್ ಮಿಚೆಲ್ ಸ್ಯಾಂಟ್ನರ್ ನ್ಯೂಜಿಲೆಂಡ್ ಟೆಸ್ಟ್ ತಂಡಕ್ಕೆ ಪುನಾರಗಮನ ಕಂಡಿದ್ದಾರೆ. ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ನವೆಂಬರ್ 28ರಂದು ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಇದರೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ಗೆ ಚಾನೆ ದೊರೆಯಲಿದೆ. ಹಾಲಿ ವಿಶ್ವಕಪ್‌ನಲ್ಲಿ 523 ರನ್ ಕಲೆಹಾಕಿರುವ ರಚಿನ್ ರವೀಂದ್ರ, 2022ರ ಜನವರಿಯಲ್ಲಿ ಬಾಂಗ್ಲಾದೇಶ ಎದುರು ಕೊನೆಯದಾಗಿ ಟೆಸ್ಟ್ ಆಡಿದ್ದರು.ಕಿವೀಸ್ ಪರ 24 ಟೆಸ್ಟ್ ಪಂದ್ಯಗಳನ್ನಾಡಿರುವ ಮಿಚೆಲ್ ಸ್ಯಾಂಟ್ನರ್,2021ರಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದರು. ಹಂಗಾಮಿ ಕೋಚ್ ಲೂಕ್ ರಾಂಚಿ ಸಾರಥ್ಯದಲ್ಲಿ ಕಿವೀಸ್ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ.
ತಂಡ: ಟಿಮ್ ಸೌಥಿ (ನಾಯಕ), ಕೇನ್ ವಿಲಿಯಮ್ಸನ್, ವಿಲ್ ಯಂಗ್, ಟಾಮ್ ಬ್ಲಂಡಲ್ (ವಿ.ಕೀ), ಡೆವೊನ್ ಕಾನ್ ವೇ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲಾಥಮ್, ಡೆರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಎಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ.