

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ನ್ಯೂಜಿಲೆಂಡ್ (NewZealand) ನಡುವಿನ ಟೆಸ್ಟ್ ಸರಣಿಯ (Test Series) ಅಂತಿಮ ಪಂದ್ಯದಲ್ಲಿ ಆತಿಥೇಯರು 263 ರನ್ಗಳಿ ಆಲೌಟ್ ಆಗಿದ್ದು, 28 ರನ್ಗಳ ಅತ್ಯಲ್ಪ ಮುನ್ನಡೆಯನ್ನು ಸಾಧಿಸಿದೆ.
4 ವಿಕೆಟ್ ನಷ್ಟದೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ತಂಡವು (Team India) ಶುಭಮನ್ ಗಿಲ್ (90 ರನ್, 146 ಎಸೆತ, 7 ಬೌಂಡರಿ, 1 ಸಿಕ್ಸರ್), ರಿಷಭ್ ಪಂತ್ (60 ರನ್, 59 ಎಸೆತ, 8 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 263 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಎದುರಾಳಿಗಳ ವಿರುದ್ಧ 28 ರನ್ಗಳ ಮುನ್ನಡೆಯನ್ನು ಭಾರತ ತಂಡ ಸಾಧಿಸಿದೆ.
ಟೀಮ್ ಇಂಡಿಯಾದ (Team India) ಆರಂಭಿಕ ಆಟಗಾರ ಶುಭ್ಮನ್ ಗಿಲ್ ಶತಕದಂಚಿನಲ್ಲಿ ಎಡವಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. 146 ಎಸೆತಗಳಲ್ಲಿ 4 ಫೋರ್, 1 ಸಿಕ್ಸ್ನೊಂದಿಗೆ 90 ರನ್ ಬಾರಿಸಿ ಶತಕದತ್ತ ದಾಪುಗಾಲಿಟ್ಟಿದ್ದ ಗಿಲ್, ಎಜಾಝ್ ಪಟೇಲ್ ಎಸೆತದಲ್ಲಿ ಸ್ಲಿಪ್ನಲ್ಲಿದ್ದ ಡೆರಿಲ್ ಮಿಚೆಲ್ಗೆ ಚ್ ನೀಡಿದರು. ಈ ಮೂಲಕ ಕೇವಲ 10 ರನ್ಗಳಿಂದ ಶತಕ ವಂಚಿತರಾದರು. ಇದೀಗ ನ್ಯೂಜಿಲೆಂಡ್ ತಂಡವು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, 1 ವಿಕೆಟ್ ನಷ್ಟಕ್ಕೆ 19 ರನ್ ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಕೊಂಡ ನ್ಯೂಜಿಲೆಂಡ್ ತಂಡವು ಡೆರಿಲ್ ಮಿಚೆಲ್ (82 ರನ್, 129 ಎಸೆತ, 3 ಬೌಂಡರಿ, 3 ಸಿಕ್ಸರ್), ವಿಲ್ ಯಂಗ್ (71 ರನ್, 138 ಎಸೆತ, 4 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 65.4 ಓವರ್ಗಳಲ್ಲಿ 235 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ (Ravindra Jadeja) (22-1-65-5), ವಾಷಿಂಗ್ಟನ್ ಸುಂದರ್ (18.4-2-81-4), ಆಕಾಶ್ ದೀಪ್ (5-0-22-1) ರನ್ ನೀಡಿ ವಿಕೆಟ್ ಪಡೆದಿದ್ದರು.