ವಿರಾಟ್ ಕೊಹ್ಲಿ ಬಂಧಿಸುವಂತೆ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ..!

virat and tahamanah for web
Published on

ಬೆಂಗಳೂರು: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಭಾಟಿಯಾ ಅವರನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜಾಹೀರಾತಿನ ಮೂಲಕ ಆನ್‌ಲೈನ್‌ನಲ್ಲಿ ಗ್ಯಾಂಬ್ಲಿಂಗ್‌ಗೆ ಪ್ರಚೋದನೆ ನೀಡುತ್ತಿರುವುದಕ್ಕೆ ಇವರನ್ನು ಬಂಧಿಸಬೇಕು ಎಂದು ಚೆನ್ನೈ ಮೂಲದ ವಕೀಲರು ಕೋರ್ಟ್ ಮೊರೆ ಹೋಗಿದ್ದಾರೆ. ಯುವಕರಿಗೆ ಮಾರ್ಗದರ್ಶನ ಹಾಗೂ ತಿಳುವಳಿಕೆ ನೀಡುವಂಥ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಬದಲಿಗೆ ಕೆಟ್ಟ ಹಾದಿ ಹಿಡಿಯಲು ಪ್ರಚೋದಿಸುವ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ಆ್ಯಪ್‌ಗಳ ಮೂಲಕ ಆನ್‌ಲೈನ್ ಗ್ಯಾಂಬ್ಲಿಂಗ್‌ನಲ್ಲಿ ಪಾಲ್ಗೊಳ್ಳಲು ಯುವಕರಿಗೆ ಪ್ರಚೋದಿಸಲಾಗುತ್ತಿದೆ. ಆನ್‌ಲೈನ್ ಗ್ಯಾಂಬ್ಲಿಂಗ್ ನಿಷೇಧಿಸಬೇಕು, ಇದರ ಪ್ರಚಾರದಿಂದ ಕೊಹ್ಲಿ ತಮನ್ನಾ ಹಿಂದೆ ಸರಿಯಬೇಕು ಎಂದು ಹೇಳಿದ್ದಾರೆ. ಚೆನ್ನೈನಲ್ಲಿ ಈ ಗ್ಯಾಂಬ್ಲಿಂಗ್ ಹುಚ್ಚು ಅಂಟಿಸಿಕೊಂಡಿದ್ದ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಈ ಸಾವಿಗೆ ಕೊಹ್ಲಿ, ತಮನ್ನಾ ಮೂಲ ಕಾರಣ, ಅವರಿಬ್ಬರನ್ನು ಬಂಧಿಸಿ ಎಂದು ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ. ಕೋರ್ಟ್ ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net