

ಯುಎಸ್ಎ: ಜೂನ್ 02ರಿಂದಆರಂಭವಾಗಲಿರುವ ಟಿ-20 ವಿಶ್ವಕಪ್ಗೆ ದಿನಗಣನೆ ಆರಂಭವಾಗಿದ್ದು, ಚುಟುಕು ವಿಶ್ವಸಮರವನ್ನು ಕಣ್ತುಂಬಿಕೊಳ್ಳಲು ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜೂನ್ 05ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಕ್ರಿಕೆಟ್ ಪ್ರೇಮಿಗಳು ಜೂನ್ 09ರಂದು ನಡೆಯಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಎದುರು ನೋಡುತ್ತಿದ್ದಾರೆ.
ಉಭಯ ದೇಶಗಳ ನಡುವಿನ ಕ್ರಿಕೆಟ್ ಕಾದಾಟವನ್ನು ಕಣ್ತುಂಬಿಕೊಳ್ಳಲು ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಪಂದ್ಯಕ್ಕೆ ಉಗ್ರರ ಕರಿನೆರಳು ತಾಗಿದೆ. ಐಸಿಸಿ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿರುವುದಾಗಿ ಅಮೆರಿಕ ಪೊಲೀಸರು ತಿಳಿಸಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಪ್ಯಾಟ್ರಿಕ್ ರೈಡರ್, ಐಸಿಸ್ನೊಂದಿಗೆ ಗುರುತಿಸಿಕೊಂಡಿರುವ ಲೋನ್ ವುಲ್ಫ್ ಎಂಬ ಉಗ್ರ ಸಂಘಟನೆಯು ಭಾರತ ಹಾಗೂ ಪಾಕಿಸ್ತಾನ ಪಂದ್ಯ ನಡೆಯಲಿರುವ ನಸ್ಸೌ ಕೌಂಟಿ ಕ್ರಿಕೆಟ್ ಕ್ಲಬ್ ಮೇಲೆ ದಾಳಿ ಮಾಡುವುದಾಗಿ ವಿಡಿಯೋ ಸಂದೇಶದ ಮೂಲಕ ಬೆದರಿಕೆ ಹಾಕಿದ್ದಾರೆ.
ಪಂದ್ಯ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾಗ್ರತೆ ವಹಿಸಲಾಗಿದೆ. ಪಂದ್ಯ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ಯಾಟ್ರಿಕ್ ರೈಡರ್ ತಿಳಿಸಿದ್ದಾರೆ.