VIDEO: ಸರ್ಕಾರಿ ಗೌರವಗಳೊಂದಿಗೆ ಅಥ್ಲೆಟಿಕ್ಸ್ ದಿಗ್ಗಜ ಮಿಲ್ಖಾ ಸಿಂಗ್ ಅಂತ್ಯಕ್ರಿಯೆ

milkha singh for web
Published on

ಚಂಡೀಗಢ: ಭಾರತದ ಅಥ್ಲೆಟಿಕ್ಸ್ ದಿಗ್ಗಜ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದರೊಂದಿಗೆ ಸ್ವತಂತ್ರ ಭಾರತದ ಮೊದಲ ಕ್ರೀಡಾ ಸೂಪರ್ ಸ್ಟಾರ್‌ನ ಯುಗಾಂತ್ಯ ಅಂತ್ಯಗೊಂಡಿತು. ಮಿಲ್ಖಾ ಸಿಂಗ್ ಅವರ ಮಗ ಹಾಗೂ ಖ್ಯಾತ ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಪಂಜಾಬ್ ರಾಜ್ಯಪಾಲ ಹಾಗೂ ಚಂಢೀಗಡದ ಆಡಳಿತಗಾರ ವಿಪಿ ಸಿಂಗ್ ಬದ್ನೋರ್, ಪಂಜಾಬ್‌ನ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಂತ್ಯಕ್ರಿಯೆಗೂ ಮುನ್ನ ಮಿಲ್ಖಾ ಸಿಂಗ್ ಅವರ ಮೃತದೇಹವನ್ನು ಸೆಕ್ಟರ್-8ನೇ ನಿವಾಸದಿಂದ ಮೆರವಣಿಗೆ ಮಾಡಲಾಯಿತು. ಸೆಕ್ಟರ್ 25ನೇ ಮೈದಾನದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ನೂರಾರು ಅಭಿಮಾನಿಗಳು ಪಾಲ್ಗೊಂಡರು. ಕೋವಿಡ್‌ನಿಂದ ಬಳಲುತ್ತಿದ್ದ ಮಿಲ್ಖಾ ಸಿಂಗ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೇ 24 ರಂದು ಮಿಲ್ಖಾ ಸಿಂಗ್ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡರೂ ಮತ್ತೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಜೂನ್ 3 ರಂದು ಮತ್ತೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಿಲ್ಖಾ ಸಿಂಗ್ ಅವರ ಪತ್ನಿ ನಿರ್ಮಲ್ ಕೌರ್ ಕೂಡ ಕಳೆದ ಭಾನುವಾರ ಕೋವಿಡ್‌ನಿಂದ ಮೃತಪಟ್ಟಿದ್ದರು.

ದಿಗ್ಗಜ ಮಿಲ್ಖಾ ಸಿಂಗ್, 4 ಬಾರಿ ಏಷ್ಯಾಡ್ ಚಾಂಪಿಯನ್‌ಆಗಿದ್ದರು, 1958ರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಸ್ವರ್ಣ ಗೆದ್ದಿದ್ದರೆ, 1960ರ ರೋಮ್ ಒಲಿಂಪಿಕ್ಸ್‌ನಲ್ಲಿ 400 ಮೀಟರ್ ಓಟದಲ್ಲಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. 1956 ಹಾಗೂಊ 1964ರ ಒಲಿಂಪಿಕ್ಸ್‌ನಲ್ಲಿ ಭಾರತ ಪ್ರತಿನಿಧಿಸಿದ್ದಾರೆ. 1959ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ ಭಾಜನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net