

ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ (Money laundering) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ಗೆ ಜಾರಿ ನಿರ್ದೇಶನಾಲಯ (Enforcement Directorate) ನೋಟಿಸ್ ಜಾರಿ ಮಾಡಿದೆ.
ಅಕ್ಟೋಬರ್ 03ರಂದು ಹೈದರಾಬಾದಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದ್ದು, ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ಕಳೆದ ವರ್ಷ ನವೆಂಬರ್ನಲ್ಲಿ ಅಜರುದ್ದೀನ್ ಅವರ ಮನೆ ಮೇಲೆ ಇಡಿ (ಏಧ) ದಾಳಿ ನಡೆಸಿತ್ತು.
ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ₹ 20 ಕೋಟಿ ರೂ.ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತೆಲಂಗಾಣದ ಎಸಿಬಿ ದಾಖಲಿಸಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ಪ್ರಕರಣ ದಾಖಲು ಮಾಡಿಕೊಂಡಿದೆ.