ಬಂಗಾಳ ರಣಜಿ ತಂಡದಲ್ಲಿ ಸ್ಥಾನ ಪಡೆದ ಟೀಮ್ ಇಂಡಿಯಾ ವೇಗಿ ಸಹೋದರ

New-Project-2-4
Published on

ಬೆಂಗಳೂರು: ಏಕದಿನ ವಿಶ್ವಕಪ್‌ನಲ್ಲಿ ಸರ್ವಾಧಿಕ ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಸಹೋದರ ಮೊಹಮದ್ ಕ್ೈ ಜನವರಿ 5 ರಂದು ಆರಂಭವಾಗಲಿರುವ ರಣಜಿ ಟ್ರೋಫಿ ದೇಶೀಯ ಟೂರ್ನಿಯಲ್ಲಿ ಬಂಗಾಳ ರಾಜ್ಯ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯ ತಂಡಕ್ಕೆ ಆಯ್ಕೆಯಾಗಿರುವ ಮೊಹಮದ್ ಕ್ೈ ಮೊದಲೆರಡು ಪಂದ್ಯಕ್ಕೆ ಆಯ್ಕೆಯಾಗಿರುವ 18 ಆಟಗಾರರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

2021ರಲ್ಲಿ ಲಿಸ್ಟ್ ‘ಎ’ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕ್ೈ, ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ 7 ಪಂದ್ಯಗಳಲ್ಲಿ 12 ವಿಕೆಟ್ ಕಬಳಿಸಿದ್ದಾರೆ. ಬಂಗಾಳದ ಕ್ರೀಡಾ ಸಚಿವರು ಆಗಿರುವ ಮನೋಜ್ ತಿವಾರಿ ತಂಡ ಮುನ್ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net