ಸಿಎಸ್​ಕೆ ಚಾಂಪಿಯನ್ ಆದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ್ರಾ ಧೋನಿ?

dhoni
Published on

ದೆಹಲಿ: ಪ್ರಸಕ್ತ ಸಾಲಿನ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್​.ಧೋನಿ ಅಭಿಮಾನಿಗಳಿಗೆ ಶಾಕ್​ ಸುದ್ದಿಯೊಂದು ಹೊರ ಬಿದ್ದಿದೆ.

ಐಪಿಎಲ್ ಚಾಂಪಿಯನ್ ಆದ ಬೆನ್ನಲ್ಲೇ ನಾಯಕ ಎಂ.ಎಸ್.ಧೋನಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. 2023ರ ಐಪಿಎಲ್ ಆರಂಭದಿಂದಲೂ ಧೋನಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ಈ ಕುರಿತು ಕೋಚ್ ಸ್ಟೀಫನ್ ಫ್ಲೇಮಿಂಗ್ ಕೂಡ ಹೇಳಿದ್ದರು.

ಧೋನಿ ತಮ್ಮ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಮುಂಬೈನಲ್ಲಿರುವ ಕೋಕಿಲಾ ಬೆನ್ ಆಸ್ಪತ್ರೆಗೆ ಸೇರಿದ್ದಾರೆ ಎಂದು ಹೇಳಲಾಗುತ್ತಿದ್ದಾರೆ. ಆದರೆ ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್, ಬಿಸಿಸಿಐ ಮತ್ತು ಧೋನಿ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

ಸದ್ಯಕ್ಕೆ, ಅಭಿಮಾನಿಗಳು ಮತ್ತು ಫ್ರಾಂಚೈಸ್ ಅವರು ಫಿಟ್ ಆಗಿದ್ದಾರೆ ಮತ್ತು ಮುಂದಿನ ಸೀಸನ್‌ಗೆ ಆಯ್ಕೆಗೆ ಲಭ್ಯವಾಗುತ್ತಾರೆ ಎಂದು ಭರವಸೆ ಹೊಂದಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net