ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸಿದ ಎಂ.ಎಸ್​ ಧೋನಿ ಪಡೆ| Ipl 2025

CSK
Published on

IPL 2025| ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಚೆನ್ನೈ ಸೂಪರ್​ ಕಿಂಗ್​ 2 ವಿಕೆಟ್​ಗಳ ಗೆಲುವು ಸಾಧಿಸಿತು. ಬುಧವಾರ (7) ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 179 ರನ್​ ಗಳಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ 48 ರನ್ ಗಳಿಸಿದರೆ, ಆಂಡ್ರೆ ರಸೆಲ್ 21 ಎಸೆತಗಳಲ್ಲಿ 38 ರನ್ ಗಳಿಸಿದರು.

ನಂತರ ಬ್ಯಾಟಿಂಗ್​ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಉಳಿಸಿಕೊಂಡು ಗೆಲುವು ದಾಖಲಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net