

IPL 2025: ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಜಯ ಸಾಧಿಸಿ ಐಪಿಎಲ್ 2025ರಲ್ಲಿ ನಾಲ್ಕನೇ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಬ್ಯಾಟಿಂಗ್‌ನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 180 ರನ್ ಗಳಿಸಿತು. ಸೂರ್ಯಕುಮಾರ್ 43 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 73 ರನ್ ಗಳಿಸಿ ಉತ್ತಮ ಮೊತ್ತವನ್ನು ಗಳಿಸಿತು.
ಸಾಧಾರಣ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 18.2 ಓವರ್ನಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡ ಡೆಲ್ಲಿ 121 ರನ್ ಗಳಿಸಿತು. ಈ ಮೂಲಕ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.(ಏಜೆನ್ಸೀಸ್)