

ನವದೆಹಲಿ: ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ, ಗಂಭೀರ ಗಾಯಗೊಂಡ ರಿಷಭ್ ಪಂತ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿನ ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅಪಘಾತದಲ್ಲಿ ರಿಷಭ್ ಪಂತ್ ತೀವ್ರವಾಗಿ ಗಾಯಗೊಂಡಿದ್ದರು. ತಲೆ, ಬೆನ್ನು ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಅನೇಕ ರಾಜಕಾರಣಿಗೆಳು, ಕ್ರಿಕೆಟ್ ತಾರೆಯರು, ಅಭಿಮಾನಿಗಳು ಸೇರಿದಂತೆ ಎಲ್ಲರೂ ರಿಷಬ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ರಿಷಭ್ ಪಂತ್ ಆದಷ್ಟು ಬೇಗನೆ ಗುಣಮುಖರಾಗಲಿ ಎಂದಿದ್ದಾರೆ.
ಘಟನೆಯ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಮುಂಜಾನೆ ಕಾರು ಅಪಘಾತದಿಂದ ಆಸ್ಪತ್ರೆ ಸೇರಿಕೊಂಡಿರುವ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಶೀಘ್ರ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸುತ್ತೇನೆ. ಆದಷ್ಟು ಬೇಗನೆ ಗುಣಮುಖರಾಗಿ ಮತ್ತೆ ಎಂದಿನಂತೆ ಮೈದಾನಕ್ಕಿಳಿಯುತ್ತಾರೆ ಎಂದಿದ್ದಾರೆ.
Narendra Modi and Basavaraj Bommai wished for Pant's recovery