ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಂದ ಶಮಿಗೆ ಅರ್ಜುನ ಪ್ರಶಸ್ತಿ ಪ್ರದಾನ

murma
Published on

ನವದೆಹಲಿ: ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊಹಮ್ಮದ್​ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು.

2023 ರ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಅವರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸ್ಸು ಮಾಡಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಆಟಗಾರ ಭಾರತದ 2ನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ಪಾತ್ರರಾಗಿದ್ದಾರೆ. ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು.

ಈ ಪ್ರಶಸ್ತಿ ಪಡೆಯುವುದೇ ಜೀವನದ ಕನಸಾಗಿತ್ತು. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ಎಲ್ಲರೂ ಈ ಪ್ರಶಸ್ತಿಯನ್ನು ಗೆಲ್ಲಲು ಆಗುವುದಿಲ್ಲ. ಈ ಪ್ರಶಸ್ತಿಗೆ ನನ್ನ ಹೆಸರು ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷ ಪಡುತ್ತಿದ್ದೇನೆ ಎಂದು ಶಮಿ ಎಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70 ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಶಮಿ ಉತ್ತಮ ಪ್ರದರ್ಶನದಿಂದ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ಗೇರಿತ್ತು. ಆಸ್ಟ್ರೇಲಿಯಾಗೆ ಶರಣಾಗುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net