

ವೆಲ್ಲಿಂಗ್ಟನ್: ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಒಂದು ರನ್ಗಳ ಅಂತರದಿಂದ ಗೆದ್ದು ಬೀಗಿದೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಒಂದು ರನ್ಗಳ ಅಂತರದಿಂದ ಗೆದ್ದು ಬೀಗಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ನ್ಯೂಜಿಲೆಂಡ್ ಪಾತ್ರವಾಗಿದೆ.
ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ಗೆಲುವಿಗೆ 258 ರನ್ಗಳ ಗುರಿ ನೀಡಿತ್ತು. ಬೆನ್ ಸ್ಟೋಕ್ಸ್ ಪಡೆ ನಾಲ್ಕನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತ್ತು. ಆದರೆ ಟಿಮ್ ಸೌಥಿ ಪಡೆ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು, ಇಂಗ್ಲೆಂಡ್ ತಂಡವನ್ನು 256 ರನ್ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.
ಕೊನೆಯ ವಿಕೆಟ್ಗೆ ಇಂಗ್ಲೆಂಡ್ ಗೆಲ್ಲಲು 7 ರನ್ ಬೇಕಾಗಿತ್ತು. ಆದರೆ ವ್ಯಾಗ್ನರ್ ಎಸೆತದಲ್ಲಿ ಎಡವಿದ ಜೇಮ್ಸ್ ಆ್ಯಂಡರ್ಸನ್ ಕೀಪರ್ಗೆ ಕ್ಯಾಚ್ ನೀಡಿದರು. ಇದರೊಂದಿಗೆ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿಕೊಂಡಿತು.
ಟೆಸ್ಟ್ ಕ್ರಿಕೆಟ್ನಲ್ಲಿ 26ನೇ ಶತಕ ಸಿಡಿಸಿದ ಮಾಜಿ ನಾಯಕ ಕೇನ್ ವಿಲಿಯಮ್ಸನ್ (132ರನ್) ದಿಟ್ಟ ಹೋರಾಟದ ನೆರವಿನಿಂದ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ತಿರುಗೇಟು ನೀಡಲು ಸಾಧ್ಯವಾಗಿದೆ.