T20 ವಿಶ್ವಕಪ್​ಗೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪೂರನ್​ ವಿದಾಯ! 29ನೇ ವಯಸ್ಸಿಗೆ ಈ ನಿರ್ಧಾರ | Nicholas Pooran

ವಿಜಯವಾಣಿ (67)
Published on

Nicholas Pooran: ಐಪಿಎಲ್​ 18ನೇ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ವೆಸ್ಟ್​ ಇಂಡೀಸ್​ ದೈತ್ಯ ಪ್ರತಿಭೆ ನಿಕೋಲಸ್​ ಪೂರನ್,​ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದಾರೆ.

ಇಂದು (ಜೂ.10) ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ದೊಡ್ಡ ಶಾಕ್ ನೀಡಿದ್ದಾರೆ. ಕೇವಲ 29ನೇ ವಯಸ್ಸಿಗೆ ಈ ನಿರ್ಧಾರ ಏಕೆ ಮಾಡಿದರು ಪೂರನ್? ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮತ್ತು ಕ್ರಿಕೆಟ್​ ವಲಯದಲ್ಲಿ ಕಾಡತೊಡಗಿದೆ. ನಿವೃತ್ತಿ ಕುರಿತಂತೆ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೂರನ್ ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ವೆಸ್ಟ್​ ಇಂಡೀಸ್​ ಪರ 61 ಟಿ20 ಮತ್ತು 106 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 4,000ಕ್ಕೂ ಅಧಿಕ ರನ್ ಗಳಿಸಿರುವ ಪೂರನ್​, ಭಾರತೀಯ ಕ್ರಿಕೆಟ್​ ಲೀಗ್​ನಲ್ಲಿ ಲಖನೌ ಸೂಪರ್ ಜೈಂಟ್ಸ್​ ಕಳೆದ ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಕೇವಲ ಐಪಿಎಲ್​ನಲ್ಲಿ ಮಾತ್ರವಲ್ಲದೇ ವೆಸ್ಟ್ ಇಂಡೀಸ್​ ಪರ ಅಬ್ಬರದ ಬ್ಯಾಟಿಂಗ್ ನಡೆಸಿ, ತಂಡಕ್ಕೆ ಹೆಚ್ಚುವರಿ ರನ್​ಗಳ ಕೊಡುಗೆ ನೀಡಿದ್ದಾರೆ. ಇನ್ನು 8 ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೂ ಮುನ್ನವೇ ಅವರು ಕ್ರಿಕೆಟ್​ ಜಗತ್ತಿಗೆ ಗುಡ್​ಬೈ ಹೇಳಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net