ಚೊಚ್ಚಲ ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ನೀತಾ ಅಂಬಾನಿ ಅಭಿನಂದನೆ

web nita
Published on

ಮುಂಬೈ: ಭಾರತ ಮಹಿಳಾ ಕ್ರಿಕೆಟ್​ ತಂಡ ಭಾನುವಾರ ನವಿಮುಂಬೈನಲ್ಲಿ ಚೊಚ್ಚಲ ಏಕದಿನ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದ ವೇಳೆ ಕ್ರೀಡಾಂಗಣದಲ್ಲಿ ಹಾಜರಿದ್ದು, ತಂಡವನ್ನು ಹುರಿದುಂಬಿಸಿದ ನೀತಾ ಎಂ. ಅಂಬಾನಿ ಮತ್ತು ಆಕಾಶ್​ ಅಂಬಾನಿ ಅವರು, ಹರ್ಮಾನ್​ಪ್ರೀತ್ ಕೌರ್​ ಬಳಗವನ್ನು ಅಭಿನಂದಿಸಿದರು ಮತ್ತು ಇಡೀ ದೇಶಕ್ಕೆ ಅಪಾರ ಸಂತೋಷ, ಸಂಭ್ರಮ ತಂದಿದ್ದಕ್ಕಾಗಿ ಧನ್ಯವಾದ ತಿಳಿಸಿದರು.

'ಮಧ್ಯರಾತ್ರಿಯ ಸಮಯದಲ್ಲಿ ನಮ್ಮ ಹುಡುಗಿಯರು ಮೊದಲ ಐಸಿಸಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ. ನೀವು ಧೈರ್ಯ, ದೃಢನಿಶ್ಚಯ ಮತ್ತು ಆತ್ಮವಿಶ್ವಾಸದಿಂದ ಆಡಿದ ರೀತಿ ಇಡೀ ರಾಷ್ಟ್ರವನ್ನು ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ನಾವೆಲ್ಲರೂ ನಿಮ್ಮ ಬಗ್ಗೆ ತುಂಬಾ ಹೆಮ್ಮೆಪಡುತ್ತೇವೆ. ನಾನು ಧನ್ಯವಾದ ಮತ್ತು ಜೈ ಹಿಂದ್ ಎಂದು ಹೇಳಲು ಬಯಸುತ್ತೇನೆ' ಎಂದು ನೀತಾ ಎಂ. ಅಂಬಾನಿ ಅವರು ಹೇಳಿದರು.

ಭಾರತ ತಂಡ ಭಾನುವಾರ ನವಿಮುಂಬೈನ ಡಾ. ಡಿವೈ ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳಿಂದ ಮಣಿಸಿತು. ಈ ಮೂಲಕ ಮೊಟ್ಟಮೊದಲ ಬಾರಿಗೆ ಐಸಿಸಿ ಟ್ರೋಫಿಯೊಂದನ್ನು ಗೆದ್ದು ಹೊಸ ಇತಿಹಾಸ ಬರೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net