Boxing Day Test : ಭರ್ಜರಿ ಶತಕ ಸಿಡಿಸಿ..ನಾನು ತಲೆಬಾಗುವುದಿಲ್ಲ ಎಂದು 'ಪುಷ್ಪ' ಶೈಲಿಯಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್ ರೆಡ್ಡಿ

nitishreddy
Published on

ನವದೆಹಲಿ:  ( Boxing Day Test) ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಅರ್ಧಶತಕ ಬಾರಿಸಿ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ್ದಾರೆ.ಈ ಕುರಿತಾದ ವೀಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಯಾಮ್ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57) ಹಾಗೂ ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರು. ಆ ಬಳಿಕ ಬಂದ ಸ್ಟೀವ್ ಸ್ಮಿತ್ 140 ರನ್ ಬಾರಿಸಿ ಅಬ್ಬರಿಸಿದರು. ಈ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ.

ಪ್ರಥಮ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ 90 ಓವರ್​​ಗಳ ಮುಕ್ತಾಯದ ವೇಳೆಗೆ ಮೊದಲ ಇನಿಂಗ್ಸ್​ನಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಯುವ ದಾಂಡಿಗ ಚೊಚ್ಚಲ ಹಾಫ್ ಸೆಂಚುರಿ ಎಂಬುದು ವಿಶೇಷ.

ಅರ್ಧಶತಕದ ಸಾಧನೆ ಮಾಡುತ್ತಿದ್ದಂತೆ ಬ್ಯಾಟ್ ಮೂಲಕ ತಗ್ಗೋದೆ ಇಲ್ಲ ಎಂಬ ಪುಷ್ಪ ಶೈಲಿಯಲ್ಲಿ ಸಂಭ್ರಮಿಸಿದರು. ಅರ್ಧಶತಕ ಪೂರೈಸುತ್ತಿದ್ದಂತೆಯೇ ಪುಷ್ಪ ಸೆಲಿಬ್ರೇಷನ್ ಮಾಡಿ ಗಮನ ಸೆಳೆದಿದ್ದಾರೆ.

ನಿತೀಶ್   ಅವರ ತಂದೆ ಮುತ್ಯಾಲ ರೆಡ್ಡಿ, ನಿತೀಶ್ ಅವರ ಮೊದಲ ಶತಕವನ್ನು ವೀಕ್ಷಿಸಿದರು. ಮಗ ಶತಕ ಬಾರಿಸಿದಾಗ ಭಾವುಕರಾದರು.   ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net