

ನವದೆಹಲಿ: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರ ಡಿವೋರ್ಸ್ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಸೆರ್ಬಿಯಾ ಮೂಲದ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇಬ್ಬರ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಮೂಡಿದ್ದು ಬೇರೆ ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ನಲ್ಲಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರನಾಗಿರುವ ಹಾರ್ದಿಕ್ ಪಾಂಡ್ಯ ಈ ವರ್ಷ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಮೊದಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ ಹಾರ್ದಿಕ್, ಮುಂಬೈಗೆ ಹಿಂತಿರುಗಿ ನಾಯಕನ ಸ್ಥಾನವನ್ನು ಅಲಂಕರಿಸಿದರು. ಆದರೆ, ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ತಂಡ ಹೀನಾಯವಾಗಿ ಸೋತು ಟೂರ್ನಿಯಿಂದ ಹೊರಬಿದ್ದಿತು. ಇದರಿಂದ ಹಾರ್ದಿಕ್ ತೀವ್ರ ಟೀಕೆಗೆ ಗುರಿಯಾದರು.
ಐಪಿಎಲ್ ಸುದ್ದಿ ತಣ್ಣಗಾಗುತ್ತಿದ್ದಂತೆಯೇ ಹಾರ್ದಿಕ್ ಅವರ ವೈವಾಹಿಕ ಜೀವನದ ಸುದ್ದಿ ಹೆಚ್ಚು ಚರ್ಚೆಯಾಗುತ್ತಿದೆ. ನತಾಶಾ ಮತ್ತು ಹಾರ್ದಿಕ್ ನಡುವೆ ವೈಮನಸ್ಸು ಮೂಡಿದ್ದು, ಬೇರೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ನತಾಶಾ ಕೂಡ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾರ್ದಿಕ್ ಹೆಸರನ್ನು ತೆಗೆದುಹಾಕಿದರು. ಅಲ್ಲದೆ, ನಿಗೂಢ ಪೋಸ್ಟ್ಗಳನ್ನು ಹಾಕುವ ಮೂಲಕ ಇಬ್ಬರ ನಡುವೆ ಏನೂ ಸರಿಯಿಲ್ಲ ಎಂಬ ಸಂದೇಶವನ್ನು ರವಾನಿಸುತ್ತಿದ್ದಾರೆ. ಇದರ ನಡುವೆ ನತಶಾ, ಬೇರೋಬ್ಬನ ಜತೆ ಸುತ್ತಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ಈ ಎಲ್ಲ ಕಾರಣಗಳಿಂದ ಹಾರ್ದಿಕ್ ಮತ್ತು ನತಾಶಾ ಡಿವೋರ್ಸ್ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ, ನತಾಶಾ ಆಗಲಿ ಅಥವಾ ಹಾರ್ದಿಕ್ ಆಗಲಿ ಇದುವರೆಗೂ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ನೀಡಲ್ಲ.
ಇನ್ನು ನತಾಶಾ ಅವರು ಸೆರ್ಬಿಯಾ ದೇಶದಕ್ಕೆ ಸೇರಿರುವುದರಿಂದ ಆ ದೇಶದ ನಿಯಮದ ಪ್ರಕಾರ ಹಾರ್ದಿಕ್ ಪಾಂಡ್ಯ ಶೇ.70ರಷ್ಟು ಆಸ್ತಿಯನ್ನು ಪತ್ನಿಗೆ ನೀಡಬೇಕಿದೆ. ಇಬ್ಬರು ವಿಚ್ಛೇದನದ ಬಗ್ಗೆ ಯಾವುದೇ ಮಾತನಾಡದೇ ಮೌನವಾಗಿದ್ದಾರೆ. ಇದರ ನಡುವೆಯೇ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅರ್ಧ ಆಸ್ತಿಯನ್ನು ತಮ್ಮ ತಾಯಿಯ ಹೆಸರಿಗೆ ಬರೆದಿದ್ದೇನೆ. ಕಾರು, ಮನೆ ಎಲ್ಲವೂ ಅಮ್ಮನ ಹೆಸರಲ್ಲೇ ಇದೆ. ಭವಿಷ್ಯದಲ್ಲಿ ನಾನು ನನ್ನ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಹಾರ್ದಿಕ್ ಹೇಳಿರುವುದು ವಿಡಿಯೋದಲ್ಲಿದೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, ಹಾರ್ದಿಕ್ ತುಂಬಾ ಬುದ್ಧಿವಂತ. ತನ್ನ ಡಿವೋರ್ಸ್ ಬಗ್ಗೆ ಆತನಿಗೆ ಮೊದಲೇ ಗೊತ್ತಿತ್ತು ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಯಾರು ಈ ನತಾಶಾ? ಮಾರ್ಚ್ 4, 1992ರಂದು ಜನಿಸಿದ ನತಾಶಾ, ಸೆರ್ಬಿಯಾ ಮೂಲದ ಓರ್ವ ಮಾಡೆಲ್. 2012ಕ್ಕೆ ಭಾರತಕ್ಕೆ ಕಾಲಿಟ್ಟ ಈ ಬ್ಯೂಟಿ ಇಂಡಿಯನ್ ರ್ಯಾಪರ್ ಬಾದ್ಷಾ ಅವರ ಮ್ಯೂಸಿಕ್ ವಿಡಿಯೋ ಆಲ್ಬಂನಲ್ಲಿ ಹೆಜ್ಜೆ ಹಾಕುವ ಮೂಲಕ ಪ್ರಖ್ಯಾತಿ ಗಳಿಸಿದರು. ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿರುವ ನತಾಶಾ ಕೆಲ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ. ನತಾಶಾ ಅವರು ಮೊದಲಿಗೆ ಪ್ರಕಾಶ್ ಝಾ ಅವರ ಸತ್ಯಾಗ್ರಹ ಸಿನಿಮಾದಲ್ಲಿ ‘ಅಯೋ ಜಿ’ ಎಂಬ ಹಾಡೊಂದರಲ್ಲಿ ಕಾಣಿಸಿಕೊಂಡರು. ಇದಾದ ಬೆನ್ನಲ್ಲೇ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ಬಾಸ್ 8ನೇ ಆವೃತ್ತಿಯಲ್ಲಿ ಕಾಣಿಸಿಕೊಂಡರು. ಬಳಿಕ ಫರ್ಕಿ ರಿಟರ್ನ್ಸ್(ಮೆಹಬೂಬ), ಡ್ಯಾಡಿ(ಜಿಂದಗಿ ಮೆರಿ ಡ್ಯಾನ್ಸ್ ಡ್ಯಾನ್ಸ್) ಮತ್ತು ಫ್ರೈ ಡೇ (ಜಿಮೈ ಛೋಯಿ) ಚಿತ್ರಗಳ ಹಾಡಿನಲ್ಲಿ ನತಾಶಾ ಕಾಣಿಸಿಕೊಂಡರು. ಇತ್ತೀಚೆಗೆ ಇಮ್ರಾನ್ ಹಶ್ಮಿ ಅವರ ದಿ ಬಾಡಿ ಚಿತ್ರದ ಜಲಕ್ ದಿಕಲಾಜಾ ಹೊಸ ಅವತರಣಿಕೆಯ ಹಾಡಿನಲ್ಲೂ ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2019ರ ನಾಚ್ ಬೆಲಿಯೇ-9 ರಿಯಾಲಿಟಿ ಶೋನಲ್ಲಿಯೂ ಭಾಗವಹಿಸಿದ್ದರು. ಇದರಲ್ಲಿ ಮೂರನೇ ರನ್ನರ್ ಅಪ್ ಆಗಿದ್ದರು.
ಕನ್ನಡದಲ್ಲಿಯೂ ನಶೆ ಏರಿಸಿದ ನತಾಶಾ
ನಟ ದುನಿಯಾ ವಿಜಯ್ ಅಭಿನಯದ ಯೋಗರಾಜ್ ಭಟ್ ನಿರ್ದೇಶನದ ದನ ಕಾಯೋನು ಚಿತ್ರದಲ್ಲಿಯು ನತಾಶಾ ಕಾಣಿಸಿಕೊಂಡಿದ್ದಾರೆ. (ಏಜೆನ್ಸೀಸ್)