

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ (India) ಹಾಗೂ ಬಾಂಗ್ಲಾ (Bangladesh) ನಡುವೆ ನಡೆದ ಟಿ20 ಸರಣಿಯ (T20 Series) ಎರಡನೇ ಪಂದ್ಯದಲ್ಲಿ ಆತಿಥೇಯರ ಎದುರು ಪ್ರವಾಸಿಗಳು ಹೀನಾಯವಾಗಿ ಸೋಲುಂಡಿದ್ದು, ಮತ್ತೊಮ್ಮೆ ಮುಖಭಂಗವನ್ನು ಅನುಭವಿಸಿದ್ದಾರೆ. 86 ರನ್ಗಳ ಹೀನಾಯ ಸೋಲಿನ ಬಳಿಕ ನಾಯಕ ನಜ್ಮುಲ್ ಹೊಸೈನ್ ಶಾಂತೋ (Najmul Hosain Shanto) ಈ ಬಗ್ಗೆ ಮಾತನಾಡಿದ್ದು, ತಂಡದ ಪ್ರದರ್ಶನದ ಬಗ್ಗೆ ಕಿಡಿಕಾರಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾ (Team India) ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾದ ನಿತೀಶ್ ರೆಡ್ಡಿ (Nitish Reddy) (74 ರನ್, 34 ಎಸೆತ, 4 ಬೌಂಡರಿ, 7 ಸಿಕ್ಸರ್), ರಿಂಕು ಸಿಂಗ್ (Rinku Singh) (53 ರನ್, 29 ಎಸೆತ, 5 ಬೌಂಡರಿ, 3 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ಫಲವಾಗಿ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು. ಕಠಿಣ ಗುರಿಯನ್ನು ಬೆನ್ನತ್ತಿದ್ದ ಬಾಂಗ್ಲಾ (Bangladesh) ತಂಡವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್ಗಳು ಎದುರಾಳಿ ತಂಡವನ್ನು 20 ಓವರ್ಗಳಲ್ಲಿ 135 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದು, ಸರಣಿ ಟೀಮ್ ಇಂಡಿಯಾ (Team India) ಪಾಲಾಗುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಈ ಕುರಿತು ಮಾತನಾಡಿದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೊಸೈನ್ ಶಾಂತೋ (Bangladesh Captain Najmul Hosain Shanto), ಸರಣಿಯ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಇಲ್ಲೂ ಮಾಡಿದ್ದೇವೆ. ಇದು ಉತ್ತಮ ಬೆಳವಣಿಗೆಯಲ್ಲ. ಆರಂಭದಲ್ಲಿ ವಿಕೆಟ್ ಕಳೆದುಕೊಂಡಾಗ ಟೀಮ್ ಇಂಡಿಯಾ (Team India) ಕಮ್ಬ್ಯಾಕ್ ಮಾಡಿದ ರೀತಿ ಊಹಿಸಲು ಸಾಧ್ಯವಾಗಲಿಲ್ಲ. ಎದುರಾಳಿಗಳು ನಮಗೆ ಕಠಿಣ ಗುರಿ ನೀಡಿದಂತಹ ಸಂದರ್ಭದಲ್ಲಿ ಬ್ಯಾಟರ್ಗಳು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.
ಪವರ್ಪ್ಲೇ ನಂತರ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ನಂತರ ನಾವು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲಿಲ್ಲ. ಬ್ಯಾಟ್ಸ್ಮನ್ಗಳಾಗಿ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕಾಗಿದೆ, ನಾವು ನಮ್ಮಲ್ಲಿ ನಂಬಿಕೆ ಹೊಂದಿದ್ದೇವೆ. ನಮ್ಮ ಬೌಲರ್ಗಳು ಬೌಲಿಂಗ್ ಮಾಡಿದ ರೀತಿ, ಅವರು ಪ್ರಭಾವಶಾಲಿಯಾಗಿದ್ದರು, ಆದರೆ ಮಧ್ಯಮ ಓವರ್ಗಳಲ್ಲಿ ವಿಕೆಟ್ ಪಡೆಯಲು ನಮಗೆ ಸಾಧ್ಯವಾಗಲಿಲ್ಲ. ಇದು ಎಲ್ಲೋ ನಮಗೆ ಹಿನ್ನಡೆಯಾಯಿತು ಎಂದು ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೋ (Najmul Shanto Hossain) ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ (Post Match Presentation) ಹೇಳಿದ್ದಾರೆ.