ವಿಶ್ವಕಪ್​ ಕ್ರಿಕೆಟ್​​: ಭಾರತಕ್ಕೆ ಸತತ 2ನೇ ಜಯ; ಅಫ್ಘಾನಿಸ್ತಾನ ತಂಡವನ್ನು 8 ವಿಕೆಟ್​​ಗಳಿಂದ ಮಣಿಸಿದ ಟೀಮ್ ಇಂಡಿಯಾ

Cricket
Published on

ನವದೆಹಲಿ: ವಿಶ್ವಕಪ್​ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಇಂದು ಅಫ್ಘಾನಿಸ್ತಾನ ತಂಡವನ್ನು 8 ವಿಕೆಟ್​ಗಳಿಂದ ಮಣಿಸುವ ಮೂಲಕ ಭರ್ಜರಿ ಎರಡನೇ ಜಯಭೇರಿ ಬಾರಿಸಿದೆ. ಕಪ್ತಾನ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಭರ್ಜರಿ ಜೊತೆಯಾಟದ ಮೂಲಕ ಭಾರತ ಈ ಜಯವನ್ನು ಕಂಡಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 50 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು 272 ರನ್ ಗಳಿಸಿತ್ತು. ಆದರೆ ಭಾರತ ತಂಡ 35 ಓವರ್​ಗಳಲ್ಲಿ 2 ವಿಕೆಟ್​ಗಳ ನಷ್ಟದಲ್ಲಿ 273 ರನ್ ಗಳಿಸುವ ಮೂಲಕ ಜಯ ಗಳಿಸಿದೆ.

ಕಪ್ತಾನ ರೋಹಿತ್ ಶರ್ಮಾ ಅವರ ದಾಖಲೆಯ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕ ಈ ಮ್ಯಾಚ್​ನ ಹೈಲೈಟ್ ಆಗಿದ್ದು, ಇಬ್ಬರ ಜೊತೆಯಾಟಕ್ಕೆ ಕ್ರಿಕೆಟ್​ ಪ್ರೇಮಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ 84 ಬಾಲ್​ಗಳಲ್ಲಿ 134 ರನ್​ ಬಾರಿಸುವ ಮೂಲಕ ಪ್ಲೇಯರ್ ಆಫ್ ದ ಮ್ಯಾಚ್ ಎನಿಸಿಕೊಂಡಿದ್ದಾರೆ. ಭಾರತ ತಂಡದ ಇಂದಿನ ಜಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿನಂದನೆಗಳನ್ನು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net