

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಆತಿಥೇಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಸಿಸಿ ಟೂರ್ನಿಯಲ್ಲಿ, ಏಕದಿನ ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವೆ 21 ಪಂದ್ಯಗಳು ನಡೆದಿದ್ದು, ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ 4 ಪಂದ್ಯಗಳನ್ನು ಗೆದ್ದಿದೆ. ಇದರರ್ಥ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ಮೇಲುಗೈ ಸಾಧಿಸಿದೆ.
ಭಾರತ (Team India) ಹಾಗೂ ಪಾಕಿಸ್ತಾನ (Pakistan) ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದ್ದು, ಇಡೀ ವಿಶ್ವವೇ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದೆ. ನ್ಯೂಜಿಲೆಂಡ್ ವಿರುದ್ಧ 60 ರನ್ಗಳ ಸೋಲು ಕಂಡಿರುವ ಪಾಕಿಸ್ತಾನವು ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದರೆ, ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡವು ತನ್ನ ಗೆಲುವಿನ ಓಟವನ್ನು ಮುಂದುವರೆಸಲು ಸಜ್ಜಾಗಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ.
ಪಾಕಿಸ್ತಾನ: ಬಾಬರ್ ಆಜಂ, ಇಮಾಮ್ ಉಲ್ ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.