

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ನಗರದ ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದೆ.
ಭಾನುವಾರ ಸಂಜೆ ೪ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಪರ್ಯಾಯವಾಗಿ ಕಿಂಗ್ಸ್ ರಸ್ತೆ, ಯು.ಬಿ.ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್, ಕಂಠೀರವ ಕ್ರೀಡಾಂಗಣ, ಬಿ.ಆರ್.ವಿ. ಮೈದಾನದಲ್ಲಿ ವಾಹನ ನಿಲುಗಡೆಗೆ ಸ್ಥಳದ ಲಭ್ಯತೆ ಮೇಲೆ ಅವಕಾಶ ಕಲ್ಪಿಸಲಾಗಿದೆ ಸಾರ್ವಜನಿಕರು ಸಹಕರಿಸಬೇಕೆಂದು ಸಂಚಾರ ವಿಭಾಗದ ಪೊಲೀಸರು ವಿನಂತಿಸಿದ್ದಾರೆ.