

ಲಾಹೋರ್: ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ನಾಯಕತ್ವದಿಂದ ವಜಾಗೊಂಡಿದ್ದ ಬಾಬರ್ ಅಜಮ್ ಪಾಕಿಸ್ತಾನ ತಂಡದ ನಾಯಕರಾಗಿ ಮರುನೇಮಕಗೊಳ್ಳುವ ಸಾಧ್ಯತೆ ಇದೆ.
ಶಹೀನ್ ಷಾ ಅಫ್ರಿದಿಗೆ ಸೀಮಿತ ಓವರ್ ತಂಡ ಮತ್ತು ಶಾನ್ ಮಸೂದ್ಗೆ ಟೆಸ್ಟ್ ತಂಡದ ನಾಯಕತ್ವ ನೀಡಿದ ಪ್ರಯೋಗ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯು-ರ್ಟನ್ ಹೊಡೆಯಲಿದೆ ಎನ್ನಲಾಗಿದೆ.
ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಆಸ್ಟ್ರೇಲಿಯಾ ತಂಡ ಟೆಸ್ಟ್ ಸರಣಿಯಲ್ಲಿ 0-3ರಿಂದ ಸೋತಿದ್ದರೆ, ನ್ಯೂಜಿಲೆಂಡ್ನಲ್ಲಿ ಆಡಿದ ಟಿ20 ಸರಣಿಯಲ್ಲಿ 1-4ರಿಂದ ಸೋಲು ಅನುಭವಿಸಿತ್ತು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಬಾಬರ್ ಅಜಮ್ ಅವರೇ ತಂಡವನ್ನು ಮುನ್ನಡೆಸಲು ಸೂಕ್ತ ಎಂಬ ನಿರ್ಧಾರಕ್ಕೆ ಪಿಸಿಬಿ ಬಂದಿದೆ ಎನ್ನಲಾಗಿದೆ. ಪಾಕಿಸ್ತಾನ ತಂಡದ ಎಲ್ಲ ಆಟಗಾರರು ಇನ್ನು ಫೆಬ್ರವರಿ 17ರಿಂದ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡಲಿದ್ದಾರೆ. ನಂತರದಲ್ಲಿ ಇಂಗ್ಲೆಂಡ್ ವಿರುದ್ಧ 4 ಪಂದ್ಯಗಳ ಟಿ20 ಸರಣಿ ಆಡಲಿದ್ದರೆ, ಜೂನ್ನಲ್ಲಿ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ. ಅದಕ್ಕೆ ಮುನ್ನ ಬಾಬರ್ ಮರುನೇಮಕ ನಿರೀಕ್ಷಿಸಲಾಗಿದೆ.