ಕ್ರೀಡಾ ಉದ್ಯಮ ಗಾತ್ರ ಒಂದು ಲಕ್ಷ ಕೋಟಿ ರೂಪಾಯಿ ತಲುಪಲಿದೆ: ಪ್ರಧಾನಿ ಮೋದಿ ವಿಶ್ವಾಸ

modi web
Published on

ಚೆನ್ನೈ: ಭಾರತೀಯ ಕ್ರೀಡಾ ಉದ್ಯಮದ ಗಾತ್ರವು ಮುಂಬರುವ ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಶುಕ್ರವಾರ ಖೇಲೋ ಇಂಡಿಯಾ ಯೂತ್​ ಗೇಮ್ಸ್​ಗೆ ಚಾಲನೆ ನೀಡಿ ಮಾತನಾಡಿದ ಮೋದಿ, 2029ರ ಯೂತ್​ ಒಲಿಂಪಿಕ್ಸ್​ ಮತ್ತು 2036ರ ಒಲಿಂಪಿಕ್ಸ್​ ಆತಿಥ್ಯ ಒಲಿಸಿಕೊಳ್ಳಲು ಸರ್ಕಾರ ಸರ್ವಪ್ರಯತ್ನಗಳನ್ನು ಮಾಡಲಿದೆ ಎಂದರು.

ಜನವರಿ 31ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 26 ಕ್ರೀಡಾ ಸ್ಪರ್ಧೆಗಳಲ್ಲಿ 5,500ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net