

ನವದೆಹಲಿ: 09ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ರೋಹಿತ್ ಶರ್ಮ ನೇತೃತ್ವದ ಟೀಮ್ ಇಂಡಿಯಾ ಜಯಿಸಿದ್ದು, ದೇಶದಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಟೀಮ್ ಇಂಡಿಯಾ ಯಶಸ್ಸಿನಲ್ಲಿ ಬೌಲರ್ಗಳೊಂದಿಗೆ ಸೂರ್ಯಕುಮಾರ್ ಯಾದವ್ ಬೌಂಡರಿ ಲೈನ್ನಲ್ಲಿ ಹಿಡಿದ ಆ ಕ್ಯಾಚ್ ಪ್ರಮುಖ ಪಾತ್ರ ವಹಿಸಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು.
ಮೆಚ್ಚುಗೆಯ ನಡುವೆಯೇ ವಿವಾದಕ್ಕೆ ಕಾರಣವಾದ ಆ ಕ್ಯಾಚಿನ ಕುರಿತು ತನಿಖೆಯಾಗಬೇಕಿದೆ ಎಂದು ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾದ ಪತ್ರಿಕೆಗಳಲ್ಲಿ ವರದಿ ಪ್ರಕಟಿಸಲಾಗಿತ್ತು. ಇದಕ್ಕೆ ಸ್ಪಷ್ಟನೆಯಾಗಿ ಐಸಿಸಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿತ್ತು. ಈ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್ ವಿರೋಧಿಗಳಿಗೆ ತಮ್ಮ ಮಾತಿನ ಮೂಲಕವೇ ಚಾಟಿ ಬೀಸಿದ್ದಾರೆ. ಈ ಸುದ್ದಿ ಕ್ರೀಡಾ ವಲಯದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ನ ಫೈನಲ್ನಲ್ಲಿ ಸೂರ್ಯಕುಮಾರ್ ಯಾದವ್ ಡೇವಿಡ್ ಮಿಲ್ಲರ್ ಹೊಡೆದ ಚೆಂಡನ್ನು ಬೌಂಡರಿ ಲಯನ್ ಬಳಿ ಹಿಡಿದರು. ಈ ಕ್ಯಾಚಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಸ್ಟ್ರೇಲಿಯಾದ ಪ್ರತಿಷ್ಠಿತ ದಿನಪತ್ರಿಕೆ ಒಂದರಲ್ಲಿ ವರದಿಯನ್ನು ಪ್ರಕಟಿಸಲಾಗಿದೆ. . ಡೇವಿಡ್ ಮಿಲ್ಲರ್ ಮೊದಲ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಬೌಂಡರಿಯಲ್ಲಿದ್ದ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಅಮೋಘ ಕ್ಯಾಚ್ ಪಡೆದರು. ಈ ಕ್ಯಾಚ್ ಹಿಡಿಯುವಲ್ಲಿ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಹಿಡಿದಿದ್ದಾರೆ.
ಸೂರ್ಯಕುಮಾರ್ ಕರೆಕ್ಟಾಗಿ ಕ್ಯಾಚ್ ಹಿಡಿದಿದ್ದು, ನನ್ನ ಪ್ರಕಾರ ಆತ ಯಾವುದೇ ತಪ್ಪು ಮಾಡಿಲ್ಲ ಎಂದು ಭಾವಿಸುತ್ತೇನೆ. ಆದರೆ, ಆಸ್ಟ್ರೇಲಿಯಾ ಮೂಲದ ಪತ್ರಿಕೆ ಇದನ್ನು ಪ್ರಶ್ನಿಸಿದ್ದುಮ ನನಗೆ ಯಾಕೋ ಸರಿ ಅನ್ನಿಸುತ್ತಿಲ್ಲಾ. ಏಕೆಂದರೆ ಮೊದಲು ನಮ್ಮನ್ನು ಪ್ರಶ್ನಿಸುವ ಮೊದಲು ಅವರು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಮಾಡಿರುವ ಘೋರ ಅಪರಾಧಗಳ ವಿಡಿಯೋಗಳನ್ನು ಒಮ್ಮೆ ನೋಡಿ ಆ ನಂತರ ಮಾತನಾಡುವುಸು ಸೂಕ್ತ ಎಂದು ಭಾವಿಸುತ್ತೇನೆ. ಆಸ್ಟ್ರೇಲಿಯಾದವರು ಮಾಡುತ್ತಿರುವ ಆರೋಪ ಹೇಗಿದೆ ಎಂದರೆ ಮಡಿಕೆಯೊಂದು ಕೆಟಲ್ ಅನ್ನು ಕಪ್ಪು ಎಂದು ಕರೆದಂಗಿದೆ ಎಂದು ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್ ತಿರುಗೇಟು ನೀಡಿದ್ದಾರೆ.