ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್ ಪಡೆ: ಪಂಜಾಬ್‌ಗೆ ರೋಚಕ ಜಯ

New Project (2)
Published on

ಮುಲ್ಲನ್‌ಪುರ: ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ (28ಕ್ಕೆ 4) ಹಾಗೂ ಎಡಗೈ ವೇಗಿ ಮಾರ್ಕೋ ಜಾನ್ಸೆನ್ (17ಕ್ಕೆ 3) ಬಿಗಿ ದಾಳಿಯ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ 18ನೇ ಆವೃತ್ತಿಯಲ್ಲಿ ಚಾಂಪಿಯನ್ ಕೋಲ್ಕತ ನೈಟ್‌ರೈಡರ್ಸ್‌ ವಿರುದ್ಧ 16 ರನ್‌ಗಳ ರೋಚಕ ಗೆಲುವು ಒಲಿಸಿಕೊಂಡಿದೆ. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮೊತ್ತವನ್ನು ರಕ್ಷಿಸಿಕೊಂಡು ಗೆದ್ದ ದಾಖಲೆ ಬರೆದ ಶ್ರೇಯಸ್ ಅಯ್ಯರ್ ಬಳಗ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಎಂವೈಎಸ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ವೇಗಿ ಹರ್ಷಿತ್ ರಾಣಾ (25ಕ್ಕೆ 3) ಸಹಿತ ಕೆಕೆಆರ್ ಬೌಲರ್‌ಗಳ ಸಂಘಟಿತ ದಾಳಿಗೆ ಕುಸಿದ ಪಂಜಾಬ್ 15.3 ಓವರ್‌ಗಳಲ್ಲಿ 111 ರನ್‌ಗಳ ಸಾಧಾರಣ ಮೊತ್ತಕ್ಕೆ ಆಲೌಟ್ ಆಯಿತು. ಪ್ರತಿಯಾಗಿ 3 ವಿಕೆಟ್‌ಗೆ 62 ರನ್‌ಗಳಿಸಿ ಸುಸ್ಥಿತಿಯಲ್ಲಿದ್ದ ಕೆಕೆಆರ್, ಚಾಹಲ್ ದಾಳಿಗೆ ದಿಢೀರ್ ಕುಸಿತ ಕಂಡು 15.1 ಓವರ್‌ಗಳಲ್ಲಿ 95 ರನ್‌ಗಳಿಗೆ ಸರ್ವಪತನ ಕಂಡಿತು.

111. ಐಪಿಎಲ್ ಇತಿಹಾಸದಲ್ಲಿ ಯಶಸ್ವಿಯಾಗಿ ರಕ್ಷಿಸಿಕೊಂಡ ಅತ್ಯಂತ ಕಡಿಮೆ ಮೊತ್ತ ಇದಾಗಿದೆ. ಪಂಜಾಬ್ ಕಿಂಗ್ಸ್ ಎದುರು ಸಿಎಸ್‌ಕೆ 116 ರನ್ ರಕ್ಷಿಸಿಕೊಂಡಿದ್ದು, ಹಿಂದಿನ ಕನಿಷ್ಠ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net