

ಹೈದರಾಬಾದ್: ಡಿಸೆಂಬರ್ 22ರಂದು ರಾಜಸ್ಥಾನದ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು, ಭಾವಿ ಪತಿ ಜತೆಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಹೈದರಾಬಾದ್ ಉದ್ಯಮಿ ವೆಂಕಟ ದತ್ತ ಸಾಯಿ ಅವರನ್ನು ಸಿಂಧು ವಿವಾಹವಾಗುತ್ತಿದ್ದು, ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾವಿ ಪತಿ ಜತೆಗಿರುವ ಚಿತ್ರವನ್ನು ಮೊದಲ ಬಾರಿಗೆ ಪ್ರಕಟಿಸಿದ್ದಾರೆ.
ಪ್ರಸಕ್ತ ಪೊಸಿಸೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಈ ಮುನ್ನ ಐಪಿಎಲ್ ತಂಡವೊಂದರ ಜತೆಗೂ ಕಾರ್ಯನಿರ್ವಹಿಸಿದ್ದರು ಎಂಬುದು ವಿಶೇಷ. ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪಡೆದಿರುವ ವೆಂಕಟದತ್ತ ಈ ಮುನ್ನ ಜೆಎಸ್ಡಬ್ಲ್ಯು ಸಂಸ್ಥೆ ಜತೆಗೆ ಕಿರು ಅವಧಿಗೆ ಕಾರ್ಯನಿರ್ವಹಿಸಿದ್ದರು. ಜೆಎಸ್ಡಬ್ಲ್ಯು ಸಂಸ್ಥೆ ಐಪಿಎಲ್ನಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ&ಒಡೆತನವನ್ನೂ ಹೊಂದಿದೆ. ಹೀಗಾಗಿ ವೆಂಕಟದತ್ತ ಕೂಡ ಆ ಸಮಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮ್ಯಾನೇಜ್ ಮಾಡಿದ್ದರು.