ಐಸಿಸಿ ಟಿ20 ರ‌್ಯಾಂಕಿಂಗ್‌ನಲ್ಲಿ ಬಾಬರ್ ಅಜಮ್ ಕುಸಿತ, ಕನ್ನಡಿಗ ಕೆಎಲ್ ರಾಹುಲ್‌ಗೆ ಲಾಭ!

rahul web
Published on

ದುಬೈ: ಕನ್ನಡಿಗ ಕೆಎಲ್ ರಾಹುಲ್ ಐಸಿಸಿ ಟಿ20 ಬ್ಯಾಟಿಂಗ್ ರ‌್ಯಾಂಕಿಂಗ್‌ನಲ್ಲಿ 3ರಿಂದ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವೈಫಲ್ಯ ಕಂಡು 2ರಿಂದ 4ನೇ ಸ್ಥಾನ ಕುಸಿತ ಅನುಭವಿಸಿದ್ದು, ರಾಹುಲ್‌ಗೆ ಲಾಭ ತಂದಿದೆ.

ಇಂಗ್ಲೆಂಡ್‌ನ ಡೇವಿಡ್ ಮಲಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಆಸೀಸ್ ನಾಯಕ ಆರನ್ ಫಿಂಚ್ 3ನೇ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 7ನೇ ಸ್ಥಾನದಲ್ಲೇ ಉಳಿದಿದ್ದಾರೆ. ರಾಹುಲ್, ಕೊಹ್ಲಿ ಅಗ್ರ 10ರೊಳಗಿರುವ ಇಬ್ಬರು ಭಾರತೀಯರಾಗಿದ್ದಾರೆ.

ಅತ್ತ ಬೌಲಿಂಗ್ ರ‌್ಯಾಂಕಿಂಗ್‌ನಲ್ಲಿ ಅಗ್ರ 10ರೊಳಗೆ ಇಬ್ಬರೂ ಭಾರತೀಯರಿಲ್ಲ. 11ನೇ ಸ್ಥಾನದಲ್ಲಿರುವ ವಾಷಿಂಗ್ಟನ್ ಸುಂದರ್ ಅವರೇ ಉನ್ನತ ಶ್ರೇಯಾಂಕಿತ ಭಾರತೀಯ ಬೌಲರ್ ಆಗಿದ್ದಾರೆ. ಪಾಕ್ ವಿರುದ್ಧ ಸರಣಿಯಲ್ಲಿ 6 ವಿಕೆಟ್ ಕಬಳಿಸಿದ ದಕ್ಷಿಣ ಆಫ್ರಿಕಾ ಸ್ಪಿನ್ನರ್ ತಬರೇಜ್ ಶಮ್ಸಿ 2ನೇ ಸ್ಥಾನಕ್ಕೇರಿದ್ದಾರೆ. ಅಫ್ಘಾನಿಸ್ತಾನದ ಸ್ಪಿನ್ನರ್​ ರಶೀದ್ ಖಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net