

ನವದೆಹಲಿ: ಶನಿವಾರ ತನ್ನ ತವರು ಮೈದಾನ ಮುಲ್ಲಾಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(Rajasthan) ತಂಡ ಪಂಜಾಬ್ ತಂಡವನ್ನು 50 ರನ್‌ಗಳಿಂದ ಸೋಲಿಸಿತು.
ಈ ಆವೃತ್ತಿಯಲ್ಲಿ ಪಂಜಾಬ್‌ಗೆ ಇದು ಮೊದಲ ಸೋಲು. ಇದಕ್ಕೂ ಮೊದಲು ಪಂಜಾಬ್ ಎರಡು ಪಂದ್ಯಗಳನ್ನು ಆಡಿದ್ದು ಎರಡರಲ್ಲೂ ಜಯ ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಾಲ್ಕು ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. 20 ಓವರ್‌ಗಳಲ್ಲಿ ಪಂಜಾಬ್ ಒಂಬತ್ತು ವಿಕೆಟ್ ಕಳೆದುಕೊಂಡು 155 ರನ್ ಗಳಿಸಲಷ್ಟೇ ಶಕ್ತವಾಯಿತು.
ರಾಜಸ್ಥಾನ ಪರ ಯಶಸ್ವಿ ಜೈಸ್ವಾಲ್ ಮತ್ತೆ ಲಯಕ್ಕೆ ಮರಳಿದರದ್ದು, 45 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಐದು ಸಿಕ್ಸರ್‌ಗಳ ಸಹಾಯದಿಂದ 67 ರನ್ ಗಳಿಸಿದರು. ರಿಯಾನ್ ಪರಾಗ್ ಅಜೇಯ 43 ರನ್ ಗಳಿಸಿದರು. ಪಂಜಾಬ್ ಪರ ನೆಹಾಲ್ ವಾಧೇರಾ ಅರ್ಧಶತಕ ಗಳಿಸಿದರು.