

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ ನಾಲ್ಕನೇ ಪಂದ್ಯದಲ್ಲಿ ಮುಖಾಮುಖಿಯಾದ ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸಂಜು ಸ್ಯಾಮ್ಸನ್ ಕ್ಯಾಪ್ಟನ್ಸಿಯ ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ಆರ್ ಭರ್ಜರಿ ಗೆಲುವು ದಾಖಲಿಸಿತು.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ ರಾಯಲ್ಸ್, 20 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕುವಲ್ಲಿ ಯಶಸ್ವಿಯಾಯಿತು. ಈ ಗುರಿಯನ್ನು ಬೆನ್ನಟ್ಟಿದ ಲಕ್ನೋ ಪಡೆ ಆರಂಭದಲ್ಲೇ ಟ್ರೆಂಟ್ ಬೋಲ್ಟ್ ಬೋಲಿಂಗ್ ದಾಳಿಗೆ ಕ್ವಿಂಟನ್ ಡಿಕಾಕ್ ಮತ್ತು ದೇವದತ್ತ ಪಡಿಕಲ್ ಅವರ ವಿಕೆಟ್ ಕಳೆದುಕೊಂಡು ಭಾರೀ ಹಿನ್ನೆಡೆ ಅನುಭವಿಸಿತು.
ತದನಂತರ ಕ್ರೀಸ್ನಲ್ಲಿ ಬೇರೂರಿ ನಿಂತ ಕ್ಯಾಪ್ಟನ್ ಕೆ.ಎಲ್. ರಾಹುಲ್ 44 ಎಸೆತಗಳಲ್ಲಿ 58 ರನ್ ಕೊಟ್ಟು ಪೆವಿಲಿಯನ್ ಹಾದಿ ಹಿಡಿದರು. ಇನ್ನು ಸಿಕ್ಸ್, ಫೋರ್ಸ್ಗಳನ್ನು ಬ್ಯಾಕ್ ಟು ಬ್ಯಾಕ್ ಸಿಡಿಸಿದ ನಿಕೋಲಸ್ ಪೂರನ್ ಬ್ಯಾಟಿಂಗ್ ಅಬ್ಬರದಿಂದ ಲಕ್ನೋ ಸೂಪರ್ ಜೈಂಟ್ಸ್ ತನ್ನ ಮೊದಲ ಗೆಲುವು ದಾಖಲಿಸುವಲ್ಲಿ ವಿಫಲವಾಯಿತು. ಕೊನೆಯ ಓವರ್ವರೆಗೂ ಭಾರೀ ಪೈಪೋಟಿ ಕೊಟ್ಟ ಪೂರನ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಎಡವಿದರು.