

RCB:ಇಂಡಿಯನ್ ಪ್ರೀಮಿಯರ್ ಲೀಗ್ 2025ರ 18 ಆವೃತ್ತಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಹೊಸ ಕ್ಯಾಪ್ಟನ್ ಆಗಿ ರಜತ್ ಪಾಟೀದಾರ್ ಅವರನ್ನ ಇದೀಗ ನೇಮಕ ಮಾಡಲಾಗಿದೆ.
ಈ ಬಾರಿ ನಡೆದ ಮೆಗಾ ಆ್ಯಕ್ಷನ್ನಲ್ಲಿ ತಂಡದ ನಾಯಕನಾಗಿದ್ದ ಫಾಫ್ ಡು ಪ್ಲೆಸ್ಸಿಸ್ ಅವರನ್ನು ಆರ್ಸಿಬಿ ಫ್ರಾಂಚೈಸಿ ಕೈ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಇದ್ದ ನಾಯಕ ಸ್ಥಾನಕ್ಕೆ ಇದೀಗ ರಜತ್ ಪಾಟೀದಾರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಆಪ್ತಗಳೆಯ(ರಜತ್ ಪಾಟಿದಾರ್) ಬಗ್ಗೆ ಒಂದಿಷ್ಟು ಮಾತುಗಳನ್ನಾಡಿದ್ದಾರೆ.
"ನಾನು ಮತ್ತು ಇತರ ತಂಡದ ಸದಸ್ಯರು ನಿಮ್ಮ ಹಿಂದೆಯೇ ಇರುತ್ತೇವೆ ರಜತ್. ಈ ಫ್ರಾಂಚೈಸ್ನಲ್ಲಿ ನೀವು ಬೆಳೆದ ರೀತಿ ಮತ್ತು ನೀವು ನಿರ್ವಹಿಸಿದ ರೀತಿ, ನೀವು ಎಲ್ಲಾ RCB ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದಿದ್ದೀರಿ. ನಿಮ್ಮ ಆಟ ಮತ್ತು ನಿಮ್ಮ ಕಾರ್ಯ ನಾಯಕತ್ವಕ್ಕೆ ತುಂಬಾ ಅರ್ಹವಾಗಿದೆ. ” ಎಂದು ವಿರಾಟ್ ಆಪ್ತನ ಬಗ್ಗೆ ಹೊಗಳಿದ್ದಾರೆ.
ಇನ್ನು ವಿರಾಟ್ ಕೊಹ್ಲಿ ಈ ಹಿಂದೆ 143 ಪಂದ್ಯಗಳಲ್ಲಿ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದರು. ಆದರೆ ಒಮ್ಮೆಯೂ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡದ ನಿರಾಸೆಯಲ್ಲಿ ಅವರು ನಾಯಕತ್ವ ತ್ಯಜಿಸಿದ್ದರು. ಅಲ್ಲದೆ 2021ರಲ್ಲಿ ಕೊಹ್ಲಿ ಬ್ಯಾಟಿಂಗ್ನತ್ತ ಹೆಚ್ಚಿನ ಗಮನಹರಿಸುವ ಸಲುವಾಗಿಯೂ ಈ ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಸದ್ಯ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಿಂದ ನಿವೃತ್ತಿ ಹೊಂದಿರುವುದರಿಂದ ಹೆಚ್ಚಿನ ಒತ್ತಡವಿಲ್ಲದೆ ಆರ್ಸಿಬಿ ನಾಯಕತ್ವವನ್ನು ಮರಳಿ ವಹಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿತ್ತು. ಆದರೆ, ಆರ್ಸಿಬಿ ಫ್ರಾಂಚೈಸಿ ಯುವ ಆಟಗಾರನಿಗೆ ಮಣೆಹಾಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ(ಏಜೆನ್ಸೀಸ್)