

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವಿನ ಟೆಸ್ಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯರು (Team India) ಮೇಲುಗೈ ಸಾಧಿಸಿದ್ದು, ಗೆಲುವಿನ ಮುನ್ಸೂಚನೆ ನೀಡಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ (New Zealand) ತಂಡವು ಡೆರಿಲ್ ಮಿಚೆಲ್ (82 ರನ್, 129 ಎಸೆತ, 3 ಬೌಂಡರಿ, 3 ಸಿಕ್ಸರ್), ವಿಲ್ ಯಂಗ್ (71 ರನ್, 138 ಎಸೆತ, 4 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 65.4 ಓವರ್ಗಳಲ್ಲಿ 235 ರನ್ಗಳಿಗೆ ಆಲೌಟ್ ಆಯಿತು. ಭಾರತದ (Team India) ಪರ ರವೀಂದ್ರ ಜಡೇಜಾ (Ravindra Jadeja) (22-1-65-5), ವಾಷಿಂಗ್ಟನ್ ಸುಂದರ್ (18.4-2-81-4), ಆಕಾಶ್ ದೀಪ್ (5-0-22-1) ರನ್ ನೀಡಿ ವಿಕೆಟ್ ಪಡೆದಿದ್ದರು.
ಮೊದಲನೇ ಇನ್ನಿಂಗ್ಸ್ನಲ್ಲಿ ಕಣಕ್ಕಿಳಿದ ಭಾರತ ತಂಡವು (Team India) ಶುಭಮನ್ ಗಿಲ್ (90 ರನ್, 146 ಎಸೆತ, 7 ಬೌಂಡರಿ, 1 ಸಿಕ್ಸರ್), ರಿಷಭ್ ಪಂತ್ (60 ರನ್, 59 ಎಸೆತ, 8 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 263 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಎದುರಾಳಿಗಳ ವಿರುದ್ಧ 28 ರನ್ಗಳಅ ಅತ್ಯಲ್ಪ ಮುನ್ನಡೆಯನ್ನು ಭಾರತ ತಂಡ (Team India) ಸಾಧಿಸಿತು. ನ್ಯೂಜಿಲೆಂಡ್ ಪರ ಏಜಾಜ್ ಪಟೇಲ್ (21.4-3-103-5), ಮ್ಯಟ್ ಹೆನ್ರಿ (8-1-26-1), ಗ್ಲೆನ್ ಫಿಲಿಪ್ಸ್ (20-0-84-1), ಇಶ್ ಸೋಧಿ (7-0-36-1) ರನ್ ನೀಡಿ ವಿಕೆಟ್ ಪಡೆದಿದ್ದರು.
28 ರನ್ಗಳ ಅಂತರದೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ (New Zealand) ತಂಡವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್ಗಳು ವಿಲ್ ಯಂಗ್ (51 ರನ್, 100 ಎಸೆತ, 2 ಬೌಂಡರಿ, 1 ಸಿಕ್ಸರ್) ದಿಟ್ಟ ಪ್ರತಿರೋಧದ ಹೊರತಾಗಿಯೂ ಎದುರಾಳಿಗಳನ್ನು ಎರಡನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 171 ರನ್ಗಳಿಗೆ ಕಟ್ಟಿ ಹಾಕಿದ್ದಾರೆ. ನ್ಯೂಜಿಲೆಂಡ್ ತಂಡವು ಪ್ರಸ್ತುತ 143 ರನ್ಗಳ ಮುನ್ನಡೆಯನ್ನು ಸಾಧಿಸಿದ್ದು, ಭಾರತಕ್ಕೆ 150 ರನ್ಗಳ ಟಾರ್ಗೆಟ್ ಫಿಕ್ಸ್ ಎಂದು ಹೇಳಲಾಗಿದೆ. ಮೂರನೇ ದಿನದಾಟಕ್ಕೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಭಾರತದ (Team India) ಪರ ರವೀಂದ್ರ ಜಡೇಜಾ (12.3-2-52-4), ಆರ್. ಅಶ್ವಿನ್ (16-0-63-3), ವಾಷಿಂಗ್ಟನ್ ಸುಂದರ್ (10-0-30-1), ಆಕಾಶ್ದೀಪ್ (5-0-10-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ. ಈ ಪಂದ್ಯದ ಮೂಲಕ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.